ವಿವಿಧ ಯೋಜನೆಗಳ ಸೌಲಭ್ಯ ಪಡೆದು, ಗೌರವಯುತ ಜೀವನ ನಡೆಸಿ: ಬೆಂ.ಗ್ರಾ.ಜಿ.ಪಂ ಸಿ‌ಇಓ ಎಂ.ಆರ್.ರವಿಕುಮಾರ್

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯ ಜೀತ ವಿಮುಕ್ತರು ಹಾಗೂ ಸಫಾಯಿ ಕರ್ಮಚಾರಿಗಳು ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆದು, ಗೌರವಯುತ ಜೀವನ ರೂಪಿಸಿಕೊಂಡು ಸಮಾಜದಲ್ಲಿ ಸಮಾನತೆ ಹಾಗೂ ನೆಮ್ಮದಿಯುತ ಜೀವನ ನಡೆಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ಅವರು ತಿಳಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ವತಿಯಿಂದ ದೇವನಹಳ್ಳಿ ಪಟ್ಟಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿಂದು ಏರ್ಪಡಿಸಲಾಗಿದ್ದ‌‌ ಬೆಂಗಳೂರು ಗ್ರಾಮಾಂತರ “ಜಿಲ್ಲಾ ಮಟ್ಟದ ಜೀತ ವಿಮುಕ್ತರ ಮತ್ತು ಸಫಾಯಿ ಕರ್ಮಚಾರಿಗಳ ಪುನರ್ವಸತಿ ಶಿಬಿರ”ವನ್ನು ದೀಪ‌‌ ಬೆಳಗುವ ಮೂಲಕ ಉದ್ಘಾಟಿಸಿ, ಅವರು ಮಾತನಾಡಿದರು.

ಸಾಲ ಸೌಲಭ್ಯ ಸೇರಿದಂತೆ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಜೀತ ವಿಮುಕ್ತ ಮತ್ತು ಸಫಾಯಿ ಕರ್ಮಚಾರಿಗಳು ಅರ್ಜಿ ಸಲ್ಲಿಸಿದಾಗ ಇಲಾಖೆಗಳೇ ಮುತುವರ್ಜಿ ವಹಿಸಿ, ನೈಜ ಫಲಾನುಭವಿಗಳಿಗೆ ಶೀರ್ಘವಾಗಿ ನಿಗದಿತ ಅವಧಿಯಲ್ಲಿ ಸೇವೆ ತಲುಪುವಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರು. 

ಜೀತ ವಿಮುಕ್ತ ಮತ್ತು ಸಫಾಯಿ ಕರ್ಮಚಾರಿಗಳು ಬ್ಯಾಂಕ್ ಖಾತೆ ತೆರೆಯಲು ಬಂದಂತಹ ಸಂದರ್ಭದಲ್ಲಿ ಸರ್ಕಾರ ಅವರಿಗೆ ನೀಡಿರುವ ಗುರುತಿನ ಚೀಟಿಯನ್ನು ರಾಷ್ಟ್ರೀಕೃತ ಹಾಗೂ ಲೀಡ್ ಬ್ಯಾಂಕುಗಳು ದಾಖಲೆಯಾಗಿ ಪರಿಗಣಿಸಿ, ಶೂನ್ಯ ಉಳಿತಾಯ ಖಾತೆ ತೆರೆದು ಕೊಡಬೇಕೆಂದು ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕರಿಗೆ ತಿಳಿಸಿದರು.

ಅನಾದಿ ಕಾಲದಿಂದಲೂ ಅನುಸರಿಸಿಕೊಂಡು ಬಂದಿರುವ ಕೆಲವು ಅನಿಷ್ಠ ಪದ್ದತಿಯಿಂದ ವಿಮುಕ್ತಿಗೊಂಡು, ಇಂದಿನ ಶಿಬಿರದಲ್ಲಿ ನೀಡುವ ಮಾಹಿತಿಯನ್ನು ಸರಿಯಾಗಿ ಆಲಿಸಿ, ವಿವಿಧ ಇಲಾಖೆವಾರು ಜಾರಿಯಲ್ಲಿರುವ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ಸಹಬಾಳ್ವೆಯಿಂದ ಸಮಾಜದಲ್ಲಿ ಎಲ್ಲರಂತೆ ಬದುಕು ಕಟ್ಟಿಕೊಳ್ಳಲು ತಿಳಿಸಿದರು.

ವಿವಿಧ ಇಲಾಖೆಗಳು ಜೀತಪದ್ದತಿಯಿಂದ ವಿಮುಕ್ತಿ ಹೊಂದಿದವರಿಗೆ ಹಾಗೂ ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದಿಂದ ಸಿಗುವಂತಹ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವ ಜೊತೆಗೆ ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ತಲುಪಿಸಬೇಕು ಎಂದರಲ್ಲದೆ, ಯಾವೊಬ್ಬ ಅರ್ಹ ಫಲಾನುಭವಿಯು ಇದರಿಂದ ವಂಚಿತರಾಗಬಾರದು ಎಂದರು.

ಜೀತಪದ್ದತಿಯಿಂದ ವಿಮುಕ್ತಿ ಹೊಂದಿದವರಿಗೆ ಹಾಗೂ ಸಫಾಯಿ ಕರ್ಮಚಾರಿಗಳಿಗೆ ಅತಿಮುಖ್ಯವಾಗಿ ಮೂಲಭೂತ ಸೌಕರ್ಯಗಳಾದ ಮನೆ ನಿರ್ಮಾಣಕ್ಕೆ ಹಣಕಾಸು ಸಹಾಯ, ನರೇಗಾ ಯೋಜನೆಯಡಿ ಮನೆಗೆ ಬೇಕಾದ ಸೌಲಭ್ಯಗಳು, ನಮ್ಮ ರಸ್ತೆ ನಮ್ಮ ಯೋಜನೆ, ಶೌಚಾಲಯ ನಿರ್ಮಾಣ, ಕೈತೋಟಗಳ ನಿರ್ಮಾಣ, ಹೊಲಗಳಿಗೆ ಬದು ನಿರ್ಮಾಣ ಸೇರಿದಂತೆ ವಿವಿಧ ಕಾರ್ಯಗಳನ್ನು ಮಾಡಬಹುದಾಗಿದ್ದು ಅವರ ಮಕ್ಕಳಿಗೆ ಶಿಕ್ಷಣ, ಸ್ಕಾಲರ್‌ಶಿಪ್ ಹಾಗೂ ಉನ್ನತ ಶಿಕ್ಷಣಕ್ಕೆ ಬೇಕಾದ ಸೌಲಭ್ಯ ಸೇರಿದಂತೆ ಆರೋಗ್ಯ ಸೌಲಭ್ಯಗಳನ್ನು ಸಹ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಹಯೋಗದ ಶಿಬಿರದಿಂದ ಎಲ್ಲಾ ಸಮನ್ವಯ ಅಧಿಕಾರಿಗಳು ಒಟ್ಟುಗೂಡಿ ಉತ್ತಮ ಜೀವನ ನಡೆಸಲು ಬೇಕಾಗಿರುವ ಯೋಜನೆಗಳ ಸೌಲಭ್ಯ ಪಡೆಯಲು ಈ ಶಿಬಿರ ಸಹಕಾರಿಯಾಗಿದೆ ಎಂದು ಹೇಳಿದರು.

ಸಮಾಜ ಕಲ್ಯಾಣ ಇಲಾಖೆ ನೋಡಲ್ ಅಧಿಕಾರಿ ಕೃಷ್ಣಪ್ಪ ಮಾತನಾಡಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ 2013ರ  ಕಾಯ್ದೆ ಅಡಿಯಲ್ಲಿ ಮಲ ಹೊರುವ ಹಾಗೂ ಜೀತ ಪದ್ಧತಿಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಇಂತಹ‌ ಪ್ರಕರಣಗಳು ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಜೊತೆಗೆ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿ ಗುರುತಿನ ಚೀಟಿ ನೀಡುವ ಕಾರ್ಯವಾಗುತ್ತಿದ್ದು, ಪ್ರಥಮ ಆದ್ಯತೆಯಾಗಿ ರೂ. 40,000 ಸಹಾಯಧನ ಹಾಗೂ ನಿವೇಶನವನ್ನು ನೀಡುವ ಯೋಜನೆಯನ್ನು ಸರ್ಕಾರ ಒದಗಿಸುತ್ತಿದೆ ಎಂದು ಮಾಹಿತಿ ನೀಡಿದರು.

ದೇವನಹಳ್ಳಿ ಪುರಸಭೆ ಮುಖ್ಯಾಧಿಕಾರಿ ಎ.ಹೆಚ್.ನಾಗರಾಜು ಮಾತನಾಡಿ ಪುರಸಭೆ ವತಿಯಿಂದ ಸಫಾಯಿ ಕರ್ಮಚಾರಿಗಳಿಗೆ ಹಾಗೂ ಪೌರಕಾರ್ಮಿಕರಿಗೆ ವೈದ್ಯಕೀಯ ಸೌಲಭ್ಯ, ಆಹಾರ ಹಾಗೂ ಅವರ ಕುಟುಂಬಕ್ಕೆ ಶೈಕ್ಷಣಿಕ ಸೌಲಭ್ಯದಂತಹ‌ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಸೌಲಭ್ಯದ ಮಾಹಿತಿ ಇಲ್ಲದವರು, ವಂಚಿತರು ತಮ್ಮ ಹಕ್ಕನ್ನು ಕೇಳಿ‌ಪಡೆಯುವ ಮೂಲಕ ಸಬಲೀಕರಣಗೊಳ್ಳಬೇಕು ಎಂದರು.

ಸಫಾಯಿ ಕರ್ಮಚಾರಿಗಳು‌ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೌಲಭ್ಯ ಪಡೆಯಲು ಅನುವಾಗುವಂತೆ‌ ಆರೋಗ್ಯ ಕಾರ್ಡ್ ನೀಡಲು ಸಫಾಯಿ ಕರ್ಮಚಾರಿ ಕಾವಲು‌ ಸಮಿತಿ ಸಂಚಾಲಕ ಮ್ಯಾಥ್ಯು ಮುನಿಯಪ್ಪ ಅವರು ಸಿಇಓ ಅವರಿಗೆ ಮನವಿ‌ ಸಲ್ಲಿಸಿದರು.

ಶಿಬಿರದಲ್ಲಿ ಸರ್ಕಾರದ ವಿವಿಧ ಇಲಾಖೆ, ನಿಗಮ, ಮಂಡಳಿಗಳಲ್ಲಿ ಅನುಷ್ಠಾನಗೊಳ್ಳುತ್ತಿರುವ ಯೋಜನೆಗಳಡಿ ದೊರೆಯುವ ಸೌಲಭ್ಯಗಳ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳು ಸವಿವರವಾದ ಮಾಹಿತಿಯನ್ನು ನೀಡಿದರು.

ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಮುನಿಕೃಷ್ಣಪ್ಪ, ದೇವನಹಳ್ಳಿ ತಾಲ್ಲೂಕು ಕಾರ್ಯ ನಿರ್ವಾಹಕ ಅಧಿಕಾರಿ ವಸಂತಕುಮಾರ್, ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಯ ನಿರ್ವಾಹಕ ಅಧಿಕಾರಿ ಮುರಡಯ್ಯ, ಹೊಸಕೋಟೆ ತಾಲ್ಲೂಕು ಕಾರ್ಯ ನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ, ನೆಲಮಂಗಲ ತಾಲ್ಲೂಕು ಕಾರ್ಯ ನಿರ್ವಾಹಕ ಅಧಿಕಾರಿ ಲಕ್ಷ್ಮೀನಾರಾಯಣ್

ಸಮಾಜ ಕಲ್ಯಾಣ ಇಲಾಖೆ ನೋಡಲ್ ಅಧಿಕಾರಿ ಕೃಷ್ಣಪ್ಪ,  ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಚನ್ನಬಸಪ್ಪ, ಲೀಡ್ ಬ್ಯಾಂಕ್ ಬೆಂಗಳೂರು ಜಿಲ್ಲೆಯ ಜಿಲ್ಲಾ ವ್ಯವಸ್ಥಾಪಕರು, ವಿವಿಧ ಇಲಾಖೆ, ನಿಗಮ, ಮಂಡಳಿಗಳ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ‌ಅಧಿಕಾರಿಗಳು ಸೇರಿದಂತೆ ಸಫಾಯಿ ಕರ್ಮಚಾರಿಗಳು, ಜೀತ ವಿಮುಕ್ತರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

ರಾಜಕೀಯ

ಬೆಂಗಳೂರಿನಿಂದ IPL ಫೈನಲ್ ಪಂದ್ಯ ಸ್ಥಳಾಂತರ: ನಿಖಿಲ್ ಆಕ್ರೋಶ.. ಡಿಸಿಎಂ ಪ್ರತಿಕ್ರಿಯೆ

ಬೆಂಗಳೂರಿನಿಂದ IPL ಫೈನಲ್ ಪಂದ್ಯ ಸ್ಥಳಾಂತರ: ನಿಖಿಲ್ ಆಕ್ರೋಶ.. ಡಿಸಿಎಂ ಪ್ರತಿಕ್ರಿಯೆ

"ಅಹಮದಾಬಾದ್ ನಲ್ಲಿ ದೊಡ್ಡ ಕ್ರೀಡಾಂಗಣವಿದೆ, ಹೆಚ್ಚು ಜನ ಸೇರುತ್ತಾರೆ ಎಂಬ ಉದ್ದೇಶದಿಂದ ಐಪಿಎಲ್ (IPL) ಫೈನಲ್ ಪಂದ್ಯವನ್ನು ಸ್ಥಳಾಂತರ ಮಾಡಿರಬೇಕು. ಶಾಸಕರಿಗೆ ಟಿಕೆಟ್ ವಿತರಣೆಗೂ ಅಂತಿಮ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ" ಎಂದು‌ ಡಿಸಿಎಂ ಡಿ.ಕೆ.

[ccc_my_favorite_select_button post_id="121800"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]