
ದೊಡ್ಡಬಳ್ಳಾಪುರ: ತಾಲೂಕಿನ ಕೋಡಿಹಳ್ಳಿಯಲ್ಲಿ ನ್ಯೂಸ್ ಫೌಂಡೇಷನ್ ಚಾರಿಟಬಲ್ ಟ್ರಸ್ಟ್ ಅನ್ನು ಶಾಸಕ ಟಿ.ವೆಂಕಟರಮಣಯ್ಯ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು, ಉತ್ತಮ ಉದ್ದೇಶದಿಂದ ಆರಂಭಿಸಲಾಗಿರುವ ಈ ಟ್ರಸ್ಟ್ ಅನ್ನು ತಾಲೂಕಿನ ಹೋಬಳಿ ಹಾಗೂ ಗ್ರಾಮಪಂಚಾಯಿತಿ ಮಟ್ಟದಲ್ಲಿಯೂ ಸ್ಥಾಪಿಸುವಂತೆ ಸಲಹೆ ನೀಡಿದರು.
ಜೆಡಿಎಸ್ ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ, ತಾಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣಗೌಡ ಮಾತನಾಡಿ, ಟ್ರಸ್ಟ್ ಉತ್ತಮವಾಗಿ ಸಾಗಲು ಕೇವಲ ಅಧ್ಯಕ್ಷನ ಹೊಣೆಗಾರಿಕೆ ಮಾತ್ರವಲ್ಲದೆ, ನಿರ್ದೇಶಕರ ಪಾತ್ರವನ್ನು ಜವಬ್ದಾರಿಯಿಂದ ನಿರ್ವಹಿಸಬೇಕಿದೆ. ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಸಮಸ್ಯೆ ಸೇರಿದಂತೆ ಮತ್ತಿತರ ಸಮಸ್ಯೆಗಳನ್ನು ಬಗೆಹರಿಸಲು ಹಾಗೂ ಇತರ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗುವಂತೆ ಟ್ರಸ್ಟ್ ಕಾರ್ಯ ನಿರ್ವಹಿಸಬೇಕೆಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಂಗವಾಗಿ ಕರೊನಾ ಸೋಂಕು ಹರಡದಂತೆ ಶ್ರಮಿಸಿದ 8 ಮಂದಿ ಆಶಾ ಕಾರ್ಯರ್ತೆಯರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಟಿಎಪಿಎಂಸಿಎಸ್ ಅಧ್ಯಕ್ಷ ಸಿದ್ದರಾಮಯ್ಯ, ತಾಪಂ ಮಾಜಿ ಅಧ್ಯಕ್ಷ ಶ್ರೀವತ್ಸ, ಮುಖಂಡರಾದ ತಿಪ್ಪೂರು ಬೈರೇಗೌಡ, ಅಪ್ಪಿವೆಂಕಟೇಶ್, ರಮೇಶ್, ಟ್ರಸ್ಟ್ ಅಧ್ಯಕ್ಷ ಆರ್.ರಾಮೇಗೌಡ, ಕಾರ್ಯದರ್ಶಿ ಆರ್.ಪರಮೇಶ್,ನಿರ್ದೇಶಕರಾದ ಎಂ.ಪಿ.ದಯಾನಂದ, ಖಜಾಂಚಿ ಮನು ಮತ್ತಿತರರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

