
ದೊಡ್ಡಬಳ್ಳಾಪುರ: ಸಹಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಮಕ್ಕಳಲ್ಲಿ ಧನಾತ್ಮಕ ಪ್ರಗತಿಯಾಗುತ್ತದೆ ಎಂದು ಆರ್ ಎಲ್ ಜಾಲಪ್ಪ ಸಮೂಹ ಶಿಕ್ಷಣ ಸಂಸ್ದೆಯ ನಿರ್ದೇಶಕ ಜೆ.ರಾಜೇಂದ್ರ ತಿಳಿಸಿದರು.
ಹಾರ್ಟ್ ಫುಲ್ ನೆಸ್ ಸಂಸ್ಥೆಯ ವತಿಯಿಂದ ನಡೆಸಲ್ಪಟ್ಟ ರಾಜ್ಯಮಟ್ಟದ ಶಾಲಾ ಹಂತದ “ವಿಷಯ ಪ್ರದೂಷಣೆ” ಎಂಬ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ನಗರದ ಶೀ ದೇವರಾಜ್ ಅರಸ್ ಅಂತಾರಾಷ್ಟ್ರೀಯ ವಸತಿ ಶಾಲೆಯ ಮಕ್ಕಳಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.
ಸಹಪಠ್ಯ ಚಟುವಟಿಕೆಗಳಲ್ಲಿ ಮಕ್ಕಳು ಭಾಗವಹಿಸುವುದರಿಂದ ಅವರ ಅಲೋಚನೆ ಮತ್ತು ಸಾಮಾಜಿಕ ವರ್ತನೆಯಲ್ಲಿ ಧನಾತ್ಮಕ ಪ್ರಗತಿಯುಂಟಾಗುತ್ತದೆ. ಅದ್ದರಿಂದ ಮಕ್ಕಳಿಗೆ ಈ ರೀತಿಯ ಚಟುವಟಿಕೆಗಳಲ್ಲಿ ತೊಡಗಿಸುವುದು ಉತ್ತಮ ಎಂದರು.
ಶಾಲೆಯ ಪ್ರಾಂಶುಪಾಲರಾದ ದೇವಿಕಾ ರಾಣಿ ಮಾತನಾಡಿ, ಮಕ್ಕಳನ್ನು ಕೇವಲ ಪುಸ್ತಕಕ್ಕೆ ಸೀಮಿತವಾಗಿಸದೆ, ಸಹಪಠ್ಯ ಚಟುವಟಿಕೆಗಳಲ್ಲಿನ ಮಕ್ಕಳ ಪ್ರತಿಭೆಯನ್ನು ಗುರಿತಿಸಿ ಪ್ರೋತ್ಸಾಹಿಸುವ ಜವಬ್ದಾರಿ ಶಿಕ್ಷಕರು ಹಾಗೂ ಪೋಷಕರ ಮೇಲಿದೆ ಎಂದರು.
ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ 5ನೇ ರ್ಯಾಂಕ್ ಪಡದ 9ನೇ ತರಗತಿಯ ಜಿ.ವರ್ಷಿತ, 10ನೇ ತರಗತಿಯ ಎಸ್.ಅನನ್ಯ, ಎಂ.ಕವನರಾಜ್ ಅವರಿಗೆ ಭಾಗವಹಿಸುವಿಕೆ ಪ್ರಮಾಣಪತ್ರವನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ವ್ಯವಸ್ಥಾಪಕ ರವಿಕುಮಾರ್, ಕನ್ನಡ ಶಿಕ್ಷಕಿ ಕೆ.ಎಲ್.ಸ್ವರ್ಣ ಇದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

