ಹುಬ್ಬಳ್ಳಿ: ಎಸ್ಟಿ ಮೀಸಲಾತಿಗೆ ಒತ್ತಾಯಿಸಿ ಕುರುಬ ಸಮುದಾಯ ನಡೆಸಿದ ಹೋರಾಟದಲ್ಲಿ ಆರ್.ಎಸ್.ಎಸ್ ಮತ್ತು ಬಿಜೆಪಿಯವರು ರಾಜಕೀಯ ಮಾಡುತ್ತಿದ್ದು, ಕುರುಬ ಸಮುದಾಯವನ್ನು ಅವರ ಮುಖ್ಯ ಉದ್ದೇಶ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಅವರು, ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಸಂಬಂಧ ಕುಲಶಾಸ್ತ್ರ ಅಧ್ಯಯನ ಮಾಡುವಂತೆ ನಾನು ಮುಖ್ಯಮಂತ್ರಿಯಾಗಿದ್ದಾಗ ಆದೇಶಿಸಿದ್ದೆ, ಈಗಲೂ ಅಧ್ಯಯನ ನಡೆಯುತ್ತಿದೆ, ಅದು ಮುಗಿದು ವರದಿ ಬಂದ ನಂತರ ಸರ್ಕಾರದ ಮೇಲೆ ಒತ್ತಾಡ ಹೇರಬೇಕು. ಈಗಲೇ ಸಮಾವೇಶ, ರ‌್ಯಾಲಿಗಳು ಅನಗತ್ಯ ಅನ್ನೋದು ನನ್ನ ಅನಿಸಿಕೆ. ಈ ಹೋರಾಟದಲ್ಲಿ ಆರ್.ಎಸ್.ಎಸ್ ಮತ್ತು ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಕುರುಬ ಸಮುದಾಯವನ್ನು ಅವರ ಮುಖ್ಯ ಉದ್ದೇಶ.
ಈಶ್ವರಪ್ಪನವರು ಹೋರಾಟ ಮಾಡುತ್ತಿರೋದು ಯಾರ ವಿರುದ್ಧ? ತಮ್ಮದೇ ಸರ್ಕಾರದ ವಿರುದ್ಧವಲ್ಲವೇ? ಅರ್ಥವಾಗೋಕೆ ಇದಕ್ಕಿಂತ ಹೆಚ್ಚು ಬೇಕಾ?
5 ವರ್ಷ ಮುಖ್ಯಮಂತ್ರಿಯಾಗಿ ನಾಡಿನ ಶೋಷಿತ ಸಮುದಾಯಗಳಿಗಾಗಿ ಏನೆಲ್ಲಾ ಕೆಲಸ ಮಾಡಿದ್ದೇನೆ ಎಂದು ಜನರಿಗೆ ಗೊತ್ತು. ನನ್ನ ಕೆಲಸದ ಬಗ್ಗೆ ಸರ್ಟಿಫಿಕೇಟ್ ಕೊಡೋಕೆ ಈಶ್ವರಪ್ಪ ಯಾರು? ಅವರು ಕೊಡೋ ಸರ್ಟಿಫಿಕೇಟ್ ಅಗತ್ಯ ನನಗಿಲ್ಲ. ತಮ್ಮ ಸರ್ಕಾರ ಏನು ಮಾಡಿದೆ ಎಂದು ಅವರು ಹೇಳಬೇಕು ಎಂದರು.
ಅಲ್ಲದೆ ಉಪಚುನಾವಣೆ ನಡೆಯಲಿರುವ ಉತ್ತರ ಕರ್ನಾಟಕದ ಭಾಗಗಳಲ್ಲಿ ಜೆಡಿ(ಎಸ್) ದುರ್ಬಲವಾಗಿದೆ. ಈ ಹಿನ್ನೆಲೆಯಲ್ಲಿ ತಮಗಿರುವ ಅಲ್ಪಸ್ವಲ್ಪ ಬಲವನ್ನು ಬಿಜೆಪಿಗೆ ಧಾರೆಯೆರೆದು ಆ ಪಕ್ಷಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಜೆಡಿ(ಎಸ್) ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿಲ್ಲ ಎಂದು ಕುಟುಕಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.