ಚಿಕ್ಕಬಳ್ಳಾಪುರ: ಸಿಮೆಂಟ್ ಲಾರಿ ಬೈಕ್ ಗೆ ಡಿಕ್ಕಿ ಹೊಡೆದು ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ನಾಚಿಕುಂಟೆ ಬಳಿ ನಡೆದಿದೆ.
ದೊಡ್ಡಬಳ್ಳಾಪುರ ತಾಲೂಕಿನ ಆರೂಡಿ ಗ್ರಾಮದ 19 ವರ್ಷದ ಹರ್ಷವರ್ಧನ ಮೃತ ಬೈಕ್ ಸವಾರನಾಗಿದ್ದು, ಈತನ ತಂದೆ ಹನುಮಂತರೆಡ್ಡಿ ಅವರಿಗೂ ತೀವ್ರ ಪೆಟ್ಟಾಗಿದ್ದು ಬೆಂಗಳೂರಿನ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮತ್ತೊಂದು ಪ್ರಕರಣದಲ್ಲೂ ಸಿಮೆಂಟ್ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಬೈಕ್ ಸವಾರ ಚಿಕ್ಕಹೊಸಹಳ್ಳಿ ಗ್ರಾಮದ 20 ವರ್ಷದ ಮುತ್ತೇಗೌಡ ಸಹ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಗೌರಿಬಿದನೂರು ತಾಲೂಕಿನ ತೊಂಡೆಬಾವಿ ಬಳಿ ಎಸಿಸಿ ಸಿಮೆಂಟ್ ಕಾರ್ಖಾನೆಯಿದ್ದು. ಇಲ್ಲಿಂದ ಪ್ರತಿ ನಿತ್ಯ ನೂರಾರು ಲಾರಿಗಳು ಓಡಾಟ ಮಾಡುತ್ತಿದ್ದು. ಲಾರಿ ಚಾಲಕರು ಅಜಾಗೂರೂಕತೆಯಿಂದ ಅತಿವೇಗವಾಗಿ ಚಾಲನೆ ಮಾಡುತ್ತಾರೆ ಎಂಬುದು ಸಾರ್ವಜನಿಕರ ಆರೋಪವಾಗಿದ್ದು, ಇದರಿಂದಲೇ ಪದೇ ಪದೇ ಅಪಘಾತಗಳಾಗುತ್ತಿವೆ ಎನ್ನಲಾಗುತ್ತಿದೆ.
ಈ ಕುರಿತು ಪೊಲೀಸ್ ಇಲಾಖೆ ಲಾರಿ ಚಾಲಕರಿಗೆ ಎಚ್ಚರಿಕೆ ಕೊಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳು ದಾಖಲಾಗಿವೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್, ಕೂ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.