ಬೆಂ.ಗ್ರಾ.ಜಿಲ್ಲೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದೊಂದಿಗೆ ದೊಡ್ಡಬಳ್ಳಾಪುರದ ಕಾವೇರಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದ್ದ ಮಾನಸಿಕ ಆರೋಗ್ಯದ ಬಗ್ಗೆ ಪೊಲೀಸ್ ಸಿಬ್ಬಂದಿಗಳಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಡಿವೈಎಸ್ಪಿ ಟಿ.ರಂಗಪ್ಪ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.
ಮಾನಸಿಕ ಆರೋಗ್ಯ ಕುರಿತ ತರಬೇತಿ ಕಾರ್ಯಕ್ರಮದಲ್ಲಿ ಪೊಲೀಸ್ ಸಿಬ್ಬಂದಿಗಳಿಗೆ ಕೋಟ್ಪಾ 2003ರ ಕಾಯ್ದೆ ಕುರಿತು ಅರಿವು ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ನವೀನ್‌ಕುಮಾರ್, ಕಾರ್ಯಕ್ರಮಾಧಿಕಾರಿ ಡಾ.ಶಾಂತಲಾ, ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಮಾಲೋಚಕಿ ಡಾ.ವಿದ್ಯಾರಾಣಿ, ಮನೋವೈದ್ಯ ಡಾ.ಗಿರೀಶ್‌ಕುಮಾರ್ ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್, ಕೂ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.