ದೊಡ್ಡಬಳ್ಳಾಪುರ: ಯುವ ಜನರು ಸದಾ ಕ್ರಿಯಶೀಲರಾಗಿ ವ್ಯಕ್ತಿತ್ವ ವಿಕಸನಗೊಳಿಸಿಕೊಳ್ಳುವ ಹಾಗೂ ತಮ್ಮ ಹೊಣೆ ಗಾರಿಕೆಯನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ ದೇಶಕ್ಕೆ ಕೊಡುಗೆ ನೀಡಬೇಕಿದೆ ಎಂದು ಸರ್ಕಲ್ ಇನ್ಸ್‌ಪೆಕ್ಟರ್ ಎಂ.ಬಿ.ನವೀನ್ ಕುಮಾರ್ ಕರೆ ನೀಡಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ರಾಷ್ಟ್ರ ನಿರ್ಮಾಣದಲ್ಲಿ ಯುವಜನರ ಪಾತ್ರ ವಿಷಯ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತಮ್ಮ ಶಿಕ್ಷಣದ ದಿನಗಳು ಹಾಗೂ ಪದವಿಯಲ್ಲಿ ರ್ಯಾಂಕ್ ಗಳಿಸಿದ ಸಾಧನೆಗಳನ್ನು ಮೆಲುಕು ಹಾಕಿದ ಅವರು, ಪುಸ್ತಕಗಳನ್ನು ಪ್ರೀತಿಸುವ ಹವ್ಯಾಸ ಬೆಳೆಸಿಕೊಂಡರೆ ಸಾಧನೆಗಳ ಹಾದಿ ಸುಗಮವಾಗುತ್ತದೆ.ಸಾಧನೆಗೆ ಯಾವುದೇ ಅಡ್ಡ ದಾರಿಗಳಿಲ್ಲ. ಇತಿಹಾಸ ನಾಯಕರು, ಸುತ್ತಲಿನ ಸಾಧಕರು ನಿಮಗೆ ಸ್ಪೂರ್ತಿಯಾಗಬಹುದು. ಯಾರೂ ನಿಮ್ಮನ್ನು ಆದರಿಸದಿದ್ದಾಗ ನಿಮ್ಮ ಸಾಧನೆಗೆ ನೀವೇ ಬೆನ್ನು ತಟ್ಟಿಕೊಂಡು ಗುರಿಯನ್ನು ಮುಟ್ಟಲು ನಿರಂತರ ಶ್ರಮಿಸಿ ಎಂದರು.
ನಮ್ಮ ದೇಶ ವೈವಿಧ್ಯತೆಯಲ್ಲಿ ಏಕತೆ ಕಾಣುತ್ತಿದೆ. ದೇಶದ ಅಭಿವೃದ್ಧಿಯಲ್ಲಿ ಯುವಶಕ್ತಿಯ ಪಾತ್ರ ಮಹತ್ವದ್ದಾಗಿದ್ದು, ಗ್ರಾಮೀಣ ವಿದ್ಯಾರ್ಥಿಗಳು ತಾವು ಕನ್ನಡ ಮಾಧ್ಯಮ, ಗ್ರಾಮಾಂತರ ವಿದ್ಯಾರ್ಥಿಗಳೆಂಬ ಕೀಳರಿಮೆಯನ್ನು ಬಿಟ್ಟು,ಹೊಗಳಿಕೆ ತೆಗೆಳಿಕೆಯ ಕಡೆ ಲಕ್ಷ್ಯ ನೀಡದೇ ಸಾಧನೆ ಮಾಡಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಪುಸ್ತಕಗಳನ್ನು ಓದುವುದು ,ಸಾಮಾನ್ಯ ಜ್ಞಾನ ಹೆಚ್ಚಿಸಿಕೊಳ್ಳಬೇಕು ಎಂದ ಅವರು ವಿದ್ಯಾರ್ಥಿಗಳೊಂದಿಗೆ ಕೆಲ ಕಾಲ ಸಂವಾದ ನಡೆಸಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ.ಎನ್.ಶ್ರೀನಿವಾಸಯ್ಯ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ಸದಾಶಿವರಾಮಚಂದ್ರ ಗೌಡ,ಸುರೇಶ್ ಕುಮಾರ್, ನರಸಿಂಹ ಮೂರ್ತಿ ಭಾಗವಹಿಸಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.