ಚಿಕ್ಕಬಳ್ಳಾಪುರ: ಕೆ ಎಸ್ ಆರ್ ಟಿ ಸಿ ಬಸ್ ಗಳನ್ನ ತಡೆದು ವಿದ್ಯಾರ್ಥಿಗಳು ಧಿಢೀರ್ ಪ್ರತಿಭಟನೆ ನಡೆಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಕ್ಕಬಳ್ಳಾಪುರ-ಶಿಡ್ಲಘಟ್ಟ ಮಾರ್ಗದ ಜಾತವಾರ ಬಳಿ ನಡೆದಿದೆ.
ಪ್ರತಿ ದಿನ ಶಾಲಾ ಕಾಲೇಜುಗಳಿಗೆ ತೆರಳಲು ನೂರಾರು ವಿದ್ಯಾರ್ಥಿಗಳು ಹಳ್ಳಿಗಳಿಂದ ಜಿಲ್ಲಾ ಕೇಂದ್ರಕ್ಕೆ ಬರಲು ಬಸ್ ಗಳ ವ್ಯವಸ್ಥೆ ಇಲ್ಲ.ಶಾಲಾಕಾಲೇಜುಗಳಿಗೆ ಹೋಗಲು ಹಳ್ಳಿ ಗಾಡಿನಿಂದ ಬೆಳಿಗ್ಗೆ ಮುಖ್ಯರಸ್ತೆಗೆ ನಡೆದುಕೊಂಡು ಬಂದರೂ ಇಲ್ಲಿಂದ ಸಕಾಲಕ್ಕೆ ನಮಗೆ ಬಸ್ ಸಿಗ್ತಿಲ್ಲ. ಬರೋ 2-3 ಬಸ್ ಗಳಲ್ಲಿ ವಿದ್ಯಾರ್ಥಿಗಳು ತುಂಬಿ ತುಳುಕುವಂತಾಗುತ್ತದೆ.
ಪ್ರತಿ ದಿನ ಇದೇ ಸಮಸ್ಯೆ ಎದುರಿಸಿ ರೋಸಿ ಹೋದ ವಿದ್ಯಾರ್ಥಿಗಳು ಇಂದು ಏಕಾಏಕಿ ರಸ್ತೆಗಿಳಿದು ಪ್ರತಿಭಟನೆ ನಡೆಸಿ ಬಸ್ ಗಳಿಗೆ ತಡೆಯೊಡ್ಡಿದರು. ಸ್ಥಳಕ್ಕೆ ಕೆ ಎಸ್ ಆರ್ ಟಿ ಸಿ ಅಧಿಕಾರಿಗಳು ಬಂದು ಸಮಸ್ಯೆ ಬಗೆಹರಿಸುವಂತೆ ಪಟ್ಟು ಹಿಡಿದು 2-3 ಗಂಟೆಗಳ ಕಾಲ ಬಸ್ ಗಳನ್ನ ಒಡೆದು ಪ್ರತಿಭಟಿಸಿದರು.
ವಿಷಯ ತಿಳಿದು ಸ್ಥಳಕ್ಕೆ ಬಂದ ಕೆ ಎಸ್ ಆರ್ ಟಿ ಸಿ ಅಧಿಕಾರಿಗಳು ಹಾಗೂ ಚಿಕ್ಕಬಳ್ಳಾಪುರ ಗ್ರಾಮಾಂತರ ಪಿ ಎಸ್ ಐ ನಾಳೆಯಿಂದ ಈ ಸಮಸ್ಯೆ ಎದುರಾಗದಂತೆ ಖುದ್ದು ನಾವೇ ನಾಳೆ ನಿಂತು ನಿಮಗೆ ಸಕಾಲಕ್ಕೆ ಸೂಕ್ತ ಬಸ್ ವ್ಯವರ್ಸಯೆ ಮಾಡಿಸುವುದಾಗಿ ಭರವಸೆ ನೀಡಿದ ನಂತರ ವಿದ್ಯಾರ್ಥಿಗಳು ತಮ್ಮ ಪ್ರತಿಭಟನೆ ವಾಪಾಸ್ ಪಡೆದರು.
ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಇದೇ ರೀತಿಯ ಸಮಸ್ಯೆಗಳು ಕಂಡು ಬರುತ್ತಿದ್ದು ವಿದ್ಯಾರ್ಥಿಗಳಿಗೆ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿದರು.ಅದರಲ್ಲೂ ಶಾಲಾ ಕಾಲೇಜು ವಿದ್ಯಾರ್ಥಿಗಳ ಅನೂಕೂಲಕ್ಕಾಗಿ ಬೆಳಗಿನ ಹಾಗೂ ಸಂಜೆ ವೇಳೆ ಹೆಚ್ಚುವರಿ ಬಸ್ ಗಳನ್ನ ಚಾಲನೆ ಮಾಡುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್, ಕೂ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.