ಬೆಂ.ಗ್ರಾ.ಜಿಲ್ಲೆ: ಕಂದಾಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ ಅವರು ಇಂದು (ಫೆಬ್ರವರಿ 13 ರಂದು) ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಫೆಬ್ರವರಿ 13 ರಂದು ಬೆಳಿಗ್ಗೆ 11:30 ಗಂಟೆಗೆ ದೊಡ್ಡಬಳ್ಳಾಪುರ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಕೇಂದ್ರ ಸರ್ಕಾರ ಮಂಡಿಸಿರುವ ಆತ್ಮ ನಿರ್ಭರ ಆಯವ್ಯಯ ಕುರಿತು ಹಮ್ಮಿಕೊಂಡಿರುವ ಪತ್ರಿಕಾ ಗೋಷ್ಠಿಯಲ್ಲಿ ಅವರು ಭಾಗವಹಿಸಲಿದ್ದಾರೆ.
ನಂತರ ಮಧ್ಯಾಹ್ನ 1:00 ಗಂಟೆಗೆ ದೊಡ್ಡಬಳ್ಳಾಪುರದಿಂದ ರಸ್ತೆಯ ಮೂಲಕ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ಆರ್.ಪ್ರಶಾಂತ್ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್, ಕೂ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.