ಬೆಂ.ಗ್ರಾ.ಜಿಲ್ಲೆ: ವಿಶ್ವ ಹಿಂದು ಪರಿಷತ್ ಬಜರಂಗದಳ ದೊಡ್ಡಬಳ್ಳಾಪುರ ಪ್ರಖಂಡವತಿಯಿಂದ ಫೆ.14ರಂದು ಪುಲ್ವಾಮದಲ್ಲಿ ಹುತಾತ್ಮರಾದ ವೀರ ಯೋಧರನ್ನು ಸ್ಮರಿಸುವ ಮತ್ತು ಶ್ರದ್ಧಾಂಜಲಿ ಸಲ್ಲಿಸುವ ಸಲುವಾಗಿ ಪಂಜಿನ ಮೆರವಣಿಗೆ ಆಯೋಜಿಸಲಾಗಿದೆ.
ಸಂಜೆ 6-30ಕ್ಕೆ ನಗರದ ಬೆಸ್ತರಪೇಟೆ ಬಳಿಯಿರುವ ವಿವೇಕಾನಂದ ಪ್ರತಿಮೆ ಬಳಿಯಿಂದ ಪಂಜಿನ ಮೇರವಣಿಗೆ ಆರಂಭವಾಗಲಿದ್ದು, ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಿದೆ.
ಇದೇ ವೇಳೆ ನವದೆಹಲಿಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹಿಸಲು ತೆರಳಿ ಹತ್ಯೆಗೊಳಗಾದ ರಿಂಕು ಶರ್ಮ ಅವರಿಗೂ ಶ್ರದ್ಧಾಂಜಲಿ ಸಲ್ಲಿಸಲಾಗುವುದೆಂದು ಬಜರಂಗದಳದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಂಚಾಲಕ ಮಧು ಬೇಗಲಿ ಹರಿತಲೇಖನಿಗೆ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್, ಕೂ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.