ಬೆಂ.ಗ್ರಾ.ಜಿಲ್ಲೆ: ಮಹತ್ವದ ವರ್ಗಾವರ್ಗಿ ಪ್ರಕ್ರಿಯೆಯಲ್ಲಿ ಶನಿವಾರ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರನ್ನು ವರ್ಗಾವಣೆ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್ ಆದೇಶ ಹೊರಡಿಸಿದ್ದಾರೆ.
ಇಂದು ರಾಜ್ಯ ಸರ್ಕಾರ 42 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ಪಿ.ಎನ್.ರವೀಂದ್ರ ಅವರ ಸ್ಥಾನಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ನಿರ್ದೇಶನಾಲಯದ ಆಯುಕ್ತರಾಗಿದ್ದ ಕೆ.ಶ್ರೀನಿವಾಸ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಪಿ.ಎನ್.ರವೀಂದ್ರ ಅವರನ್ನು ಯುವ ಸಬಲೀಕರಣ ಮತ್ತು ಕ್ರೀಡಾ ನಿರ್ದೇಶನಾಲಯದ ಆಯುಕ್ತರಾಗಿ ವರ್ಗಾಯಿಸಲಾಗಿದೆ.
ಜಿಲ್ಲೆಯಲ್ಲಿ ಕರೊನಾ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪಿ.ಎನ್.ರವೀಂದ್ರ ಅವರು ಕರೊನಾ ಸೋಂಕಿಗೆ ಒಳಗಾಗಿ, ಚಿಕಿತ್ಸೆ ಪಡೆದು ಸೇವೆ ಮುಂದುವರೆಸಿ ಜನರ ಮೆಚ್ಚಿಗೆಗಳಿಸಿದ್ದರು. ಇದೇ ತಿಂಗಳ 20ರಂದು ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮ ನಡೆಸಲು ಹಲವು ಸಿದ್ದತೆ ನಡೆಸುತ್ತಿದ್ದರು.
ಸರಳ, ಸಜ್ಜನ ಅಧಿಕಾರಿ ರವೀಂದ್ರ ಅವರ ವರ್ಗಾವಣೆ ಕುರಿತಂತೆ ಶಾಸಕ ಟಿ.ವೆಂಕಟರಮಣಯ್ಯ, ಜಿಪಂ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್ ಬೇಸರ ವ್ಯಕ್ತಪಡಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್, ಕೂ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.