
ದೊಡ್ಡಬಳ್ಳಾಪುರ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ಪುಲ್ವಾಮಾ ಉಗ್ರರ ದಾಳಿಗೆ ಇಂದಿಗೆ (ಫೆ.14) ಎರಡು ವರ್ಷವಾಗಿದೆ.
ಭಾರತೀಯ ವೀರ ಯೋಧರ ಬಲಿದಾನವನ್ನು ಪಂಜಿನ ಮೆರವಣಿಗೆ ಮೂಲಕ ಬಜರಂಗದಳದ ಕಾರ್ಯಕರ್ತರು ಶ್ರದ್ಧಾಂಜಲಿ ಸಲ್ಲಿಸಿದರು.
ನಗರದ ಬೆಸ್ತರಪೇಟೆ ಬಳಿಯಿರುವ ವಿವೇಕಾನಂದ ಪ್ರತಿಮೆ ಬಳಿ ಹುತಾತ್ಮ ಯೋಧರಿಗೆ ಪೂಜೆ ಸಲ್ಲಿಸಿ ಆರಂಭವಾದ ಪಂಜಿನ ಮೇರವಣಿಗೆ, ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
2019ರಲ್ಲಿ ಫೆಬ್ರವರಿ 14ರಂದು ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭದ್ರತಾ ಸಿಬ್ಬಂದಿಯನ್ನು ಸಾಗಿಸುವ ವಾಹನದ ಮೇಲೆ ಪುಲ್ವಾಮಾದ ಅವಾಂತಿಪೋರಾ ಬಳಿ ಐಇಡಿ ತುಂಬಿದ ಆತ್ಮಹತ್ಯಾ ಬಾಂಬರ್ ದಾಳಿ ನಡೆಸಲಾಯಿತು. ಈ ದಾಳಿಯಿಂದಾಗಿ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) 40 ಯೋಧರು ಹುತ್ಮಾತರಾದರು.
ಬಳಿಕ ದಾಳಿಯ ಜವಾಬ್ದಾರಿಯನ್ನು ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಎಂ) ಹೊಣೆಯನ್ನು ಹೊತ್ತುಕೊಂಡಿತು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್, ಕೂ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

