
ದೊಡ್ಡಬಳ್ಳಾಪುರ: ನಗರದ ಕೊಡಿಗೇಹಳ್ಳಿ ರಸ್ತೆಯಲ್ಲಿನ ಮರಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಭಾನುವಾರ ರಾತ್ರಿ ನಡೆದಿದ್ದು, ಮರಕ್ಕೆ ಹಾನಿಯಾಗಿದೆ.
ಸುಮಾರು 10ರ ಸಮಯದಲ್ಲಿ ಮರಕ್ಕೆ ಹಾಸಿಗೆ ಸುತ್ತಿರುವ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಇದ ನೋಡಿದ ಸ್ಥಳೀಯರು ಬೆಂಕಿಯನ್ನು ನಂದಿಸಿದ್ದಾರೆ. ಆದರೆ ಅಷ್ಟರಲ್ಲಿ ಮರ ತೀವ್ರವಾಗಿ ಸುಟ್ಟಿದೆ.
ಮರಕ್ಕೆ ಹಾಸಿಗೆ ಸುತ್ತಿ ಅದರಲ್ಲಿ ಕಲ್ಲಿಟ್ಟು ಬೆಂಕಿ ಹಚ್ಚಿರುವುದು ಉದ್ದೇಶ ಪೂರ್ವಕವಾಗಿ ಮಾಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಕೃತ್ಯ ಮಾಡಿದವರ ಕಂಡು ಹಿಡಿದು ಅವರ ವಿರುದ್ದ ಕಾನೂನು ಕ್ರಮಕೈಗೊಳ್ಳುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ..

