ಶಿವಮೊಗ್ಗ: ಬಿಪಿಎಲ್ ಚೀಟಿ ಕುರಿತು ಗೊಂದಕ್ಕೆ ಒಳಗಾಗುವ ಅಗತ್ಯ ಇಲ್ಲ. 2017 ರ ಮಾನದಂಡವೇ ಮುಂದುವರೆಯುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು. ಕೆಲವು ಶ್ರೀಮಂತರು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ. ಅನಗತ್ಯವಾಗಿ ಯಾರು ಕಾರ್ಡ್ ಪಡೆದಿದ್ದಾರೆಯೋ ಅಂಥವರು ಬಿಪಿಎಲ್ ಕಾರ್ಡ್ ನ್ನು ವಾಪಸ್ ನೀಡಬೇಕು. ಈ ಕುರಿತು ಅನಗತ್ಯ ಬಿಪಿಎಲ್ ಕಾರ್ಡ್ ಗಳನ್ನು ಹಿಂಪಡೆಯಬೇಕೆಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…