ಬೆಂ.ಗ್ರಾ.ಜಿಲ್ಲೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಬೋಧಿವೃಕ್ಷ ಎಜುಕೇಷನಲ್ ಅಂಡ್ ಚಾರಿಟಬಲ್ ಟ್ರಸ್ಟ್, ದೊಡ್ಡಬಳ್ಳಾಪುರ ತಾಲ್ಲೂಕು ಇವರ ಸಹಯೋಗದೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕು ಕಚೇರಿ ರಸ್ತೆಯ ಮಾಳವ ಸಂಜೆ ಪದವಿ ಮತ್ತು ಯೋಗವಿಜ್ಞಾನ ಮಹಾವಿದ್ಯಾಲಯದ ವಿದ್ಯಾಶಿಲ್ಪ ಪ್ರೌಢಶಾಲೆ ಸಭಾಂಗಣದಲ್ಲಿ “ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಓದು ಕಾರ್ಯಕ್ರಮ ಪ್ರಬಂಧ ಸ್ಪರ್ಧೆ- ಆಶುಭಾಷಣ ಕಾರ್ಯಕ್ರಮ” ನಡೆಯಿತು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಹಾಯಕ ನಿರ್ದೇಶಕ ಬಿ.ಮಂಜುನಾಥ್ ಆರಾಧ್ಯ, ಬಿ.ಇ.ಸಿ.ಟಿ. ಟ್ರಸ್ಟಿನ ಕಾರ್ಯದರ್ಶಿ ಜಿ.ಲಕ್ಷ್ಮೀಪತಿ, ಬೋಧಿವೃಕ್ಷ ಎಜುಕೇಷನಲ್ ಅಂಡ್ ಚಾರಿಟಬಲ್ ಟ್ರಸ್ಟ್‌ನ ಅಧ್ಯಕ್ಷ ಪ್ರೊ.ಚಂದ್ರಪ್ಪ, ದೇವರಾಜ್ ಅರಸು ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಎಂ.ಚಿಕ್ಕಣ್ಣ, ಮಾಳವ ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಮಂಜುಳಾ.ಎಸ್, ಮಾಳವ ಸಂಜೆ ಕಾಲೇಜು ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಕೆ.ಎನ್.ರಶ್ಮಿ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥ ಹೆಚ್.ಎನ್. ಲಕ್ಷ್ಮೀನಾರಾಯಣ್ ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…