ಫೆ.20ರಂದು ಹೊಸಹಳ್ಳಿಯಲ್ಲಿ ನಡೆಯುವ ಜಿಲ್ಲಾಧಿಕಾರಿ ನಡೆ, ಹಳ್ಳಿ ಕಡೆ ಕಾರ್ಯಕ್ರಮಕ್ಕೆ ನೂತನ ಜಿಲ್ಲಾಧಿಕಾರಿ ಶ್ರೀನಿವಾಸ್

ಬೆಂ.ಗ್ರಾ.ಜಿಲ್ಲೆ: ದಿಢೀರ್ ನಡೆದ ವರ್ಗಾವಣೆ ಪ್ರಕ್ರಿಯೆಯ ಕಾರಣ ಫೆಬ್ರವರಿ 20ರಂದು ಹೊಸಹಳ್ಳಿಯಲ್ಲಿ ನಡೆಯುವ ಜಿಲ್ಲಾಧಿಕಾರಿ ನಡೆ, ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿದ್ದ ಪಿ.ಎನ್.ರವೀಂದ್ರ ವರ್ಗಾವಣೆ ಹಿನ್ನೆಲೆಯಲ್ಲಿ ಅವರ ಬದಲಾಗಿ ನೂತನ ಜಿಲ್ಲಾಧಿಕಾರಿ ಶ್ರೀನಿವಾಸ್ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಕುರಿತು ಮಾಹಿತಿ ನೀಡಿರುವ ಅವರು, ಗ್ರಾಮಗಳಲ್ಲಿನ ಸಮಸ್ಯೆ ಆಲಿಸಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರ್ಕಾರವು “ಜಿಲ್ಲಾಧಿಕಾರಿಗಳ ನಡೆ-ಹಳ್ಳಿಗಳ ಕಡೆ” ಎಂಬ ವಿನೂತನ ಕಾರ್ಯಕ್ರಮವನ್ನು ಪ್ರತಿ ತಿಂಗಳ ಮೂರನೇ ಶನಿವಾರದಂದು ತಾಲ್ಲೂಕಿನ ಒಂದು ಗ್ರಾಮದಲ್ಲಿ ಹಮ್ಮಿಕೊಂಡು ಜಿಲ್ಲಾಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ ಹಾಗೂ ಜಿಲ್ಲಾಧಿಕಾರಿಗಳ ವಾಸ್ತವ್ಯದ ತಾಲ್ಲೂಕನ್ನು ಹೊರತುಪಡಿಸಿ ಉಳಿಕೆ ತಾಲ್ಲೂಕುಗಳಲ್ಲಿ ತಹಶೀಲ್ದಾರ್ ಹಾಗೂ ಇತರೆ ಅಧಿಕಾರಿಗಳು ಗ್ರಾಮ ವಾಸ್ತವ್ಯ ಹೂಡಲಿದ್ದಾರೆ.

2021ರ ಫೆಬ್ರವರಿ 20ರ ಮೂರನೇ ಶನಿವಾರದಂದು ದೊಡ್ಡಬಳ್ಳಾಪುರ ತಾಲ್ಲೂಕು ಸಾಸಲು ಹೋಬಳಿಯ ಹೊಸಹಳ್ಳಿ ಗ್ರಾಮದಲ್ಲಿ “ಜಿಲ್ಲಾಧಿಕಾರಿ ನಡೆ-ಹಳ್ಳಿ ಕಡೆಗೆ” ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಕಂದಾಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಅಶೋಕ ಅವರು ಭಾಗವಹಿಸಿ  ಫೆ.20ರ ಬೆಳಿಗ್ಗೆ 10.00 ಗಂಟೆಯಿಂದ 21ರ ಬೆಳಿಗ್ಗೆ 8.00 ಗಂಟೆಯವರೆಗೆ ಕಂದಾಯ ಇಲಾಖೆ ಹಾಗೂ ಇತರೆ ಇಲಾಖೆಗಳಿಂದ ವಿವಿಧ ಸವಲತ್ತುಗಳ ವಿತರಣೆ ಹಾಗೂ ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ.

ಸರ್ಕಾರದ ನಿರ್ದೇಶನದಂತೆ ಈಗಾಗಲೇ ಕಂದಾಯ ಅಧಿಕಾರಿಗಳು ಹಲವು ವಿಷಯಗಳ ಫಲಾನುಭವಿಗಳನ್ನು ಗುರುತಿಸಲು ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ ಪಹಣಿ ಕಾಲಂ 3 ಮತ್ತು 9ಕ್ಕೆ ವ್ಯತ್ಯಾಸ ಸರಿಪಡಿಸುವ ಬಗ್ಗೆ ಆದೇಶಗಳನ್ನು ಹೊರಡಿಸಲಾಗುವುದು‌. ಗ್ರಾಮದಲ್ಲಿ ಪೌತಿ ಹೊಂದಿದ ಖಾತೆದಾರರನ್ನು ಗುರುತಿಸಿ ಪೌತಿ ಖಾತೆ ಬದಲಾವಣೆ ಮಾಡಲು ಕ್ರಮಕೈಗೊಳ್ಳಲಾಗಿದೆ. ಗ್ರಾಮದ ಎಲ್ಲಾ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಪಿಂಚಣಿಯನ್ನು ಮಂಜೂರು ಮಾಡಲಾಗುವುದು.

ಆಶ್ರಯ ಯೋಜನೆಗೆ ಜಮೀನು ಮಂಜೂರು ಮಾಡುವುದು. ಆಧಾರ್ ಕಾರ್ಡ್‌ನ ಅನುಕೂಲತೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು. ಹದ್ದುಬಸ್ತು ಪೋಡಿ ಬಗ್ಗೆ ಮಾಹಿತಿ ನೀಡುವುದು. ಸರ್ಕಾರಿ ವಸತಿ ನಿಲಯಕ್ಕೆ ಭೇಟಿ ನೀಡಿ ಸುಸ್ಥಿತಿ ಬಗ್ಗೆ ಪರಿಶೀಲಿಸಲಾಗುವುದು. ಎಲ್ಲಾ ಅರ್ಹ ಬಡ ಕುಟುಂಬದವರಿಗೆ ಬಿಪಿಎಲ್ ಕಾರ್ಡ್ ನೀಡಲು ಕ್ರಮವಹಿಸಲಾಗುವುದು. ಗುಡಿಸಲು ರಹಿತ ವಾಸದ ಮನೆಗಳ ನಿರ್ಮಾಣದ ಬಗ್ಗೆ ಗ್ರಾಮ ಭೇಟಿಯ ಸಂರ್ಧಭದಲ್ಲಿ ಪರಿಶೀಲಿಸಲಾಗುವುದು. ಇತರೆ ಇಲಾಖೆಗಳಿಂದ ನೀಡಬಹುದಾದ ಸೌಲಭ್ಯದ ಬಗ್ಗೆ ಗ್ರಾಮದಲ್ಲಿ ಮಾಹಿತಿ ನೀಡಲು ಕ್ರಮ ಕೈಗೊಳ್ಳಲಾಗಿದೆ. 

ಕಂದಾಯ ಇಲಾಖೆಯಿಂದ ನೀಡಲಾಗುವ ಸವಲತ್ತುಗಳಾದ ವಿವಿಧ ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಯೋಜನೆಯಡಿಯಲ್ಲಿ 150 ಫಲಾನುಭವಿಗಳಿಗೆ ಪಿಂಚಣಿ ಮಂಜೂರಾತಿ ನೀಡಲಾಗುವುದು, 250 ಫಲಾನುಭವಿಗಳ ಆಧಾರ್ ನೋಂದಣಿ, 50 ಫಲಾನುಭವಿಗಳಿಗೆ ಮತದಾರರ ಗುರುತಿನ ಚೀಟಿ(EPIC), 200 ಪಹಣಿ ಕಾಲಂ 3&9ರ ತಿದ್ದುಪಡಿ, 25 ಪೌತಿ ಖಾತೆ ಸೇರಿದಂತೆ 625 ಫಲಾನುಭವಿಗಳಿಗೆ ಸವಲತ್ತುಗಳನ್ನು ನೀಡಲಿದ್ದಾರೆ.

ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಹೋಬಳಿ ಕೋರಮಂಗಲ ಗ್ರಾಮ, ಹೊಸಕೋಟೆ ತಾಲ್ಲೂಕಿನ ಜಡಿಗೇನಹಳ್ಳಿ ಹೋಬಳಿ ತವಟಹಳ್ಳಿ ಗ್ರಾಮ ಹಾಗೂ ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಹೋಬಳಿಯ ಹೊನ್ನಾರಾಯನಹಳ್ಳಿ ಗ್ರಾಮವನ್ನು ಆಯ್ಕೆ ಮಾಡಿದ್ದು, ತಹಶೀಲ್ದಾರ್, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿಗಳು ಗ್ರಾಮದಲ್ಲಿ ಸರ್ಕಾರದ ನಿರ್ದೇಶನದಂತೆ ಗ್ರಾಮಸ್ಥರಿಗೆ ಸವಲತ್ತುಗಳನ್ನು ನೀಡಲು ಹಾಗೂ ಪಹಣಿ ಕಾಲಂ 3 ಮತ್ತು 9ರ ವ್ಯತ್ಯಾಸದ ಬಗ್ಗೆ ಹಾಗೂ ಪಿಂಚಣಿ ಆಂದೋಲನದ ಬಗ್ಗೆ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಹಾಗೂ ಗ್ರಾಮ ವಾಸ್ತವ್ಯಕ್ಕೆ ಸಕಲ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.

ಕಾರ್ಯಕ್ರಮದ ಆಯೋಜನೆ ಕುರಿತು ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಹೊಸಹಳ್ಳಿಗೆ ಭೇಟಿ ನೀಡಿ ಸಿದ್ದತೆ ಪರಿಶೀಲಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

ರಾಜಕೀಯ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಜೆಡಿಎಸ್‌ನ (JDS) ಹಿರಿಯ ಮುಖಂಡ ಹುಸ್ಕೂರು ಆನಂದ್ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದು, ಭಿನಮತ ಶಮನವಾಗಿರುವ ಮಾಹಿತಿ ತಿಳಿದು ಬಂದಿದೆ.

[ccc_my_favorite_select_button post_id="121822"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]