ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅನುಸರಿಸಿ: ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್

ಬೆಂ.ಗ್ರಾ.ಜಿಲ್ಲೆ: ಪ್ರತಿಯೊಂದು ಜೀವವು ಅತ್ಯಮೂಲ್ಯವಾಗಿದ್ದು, ಅಪಘಾತದಲ್ಲಿ ಮೃತಪಟ್ಟರೆ ಅವಲಂಬಿತರ ಕುಟುಂಬಗಳು ಅನಾಥರಾಗುವುದರಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅನುಸರಿಸದಿದ್ದರೆ, ಸುಪ್ರೀಂಕೋರ್ಟ್ ನಿಯಮಾವಳಿ ಪ್ರಕಾರ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ “ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ”ಯಲ್ಲಿ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಿರುವ ಅಪಘಾತ ವಲಯಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು. ಅಲ್ಲದೆ ಅಪಘಾತ ಸಂಭವಿಸಿದ ತಕ್ಷಣವೇ ಅಂಬ್ಯುಲೆನ್ಸ್ ಸೇರಿದಂತೆ ವೈದ್ಯಕೀಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕ್ರಮವಹಿಸಿ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾ ವ್ಯಾಪ್ತಿಯಲ್ಲಿರುವ ಹೆದ್ದಾರಿ ಪ್ರಾಧಿಕಾರದ ಕ್ರೇನ್, ಆಂಬ್ಯುಲೆನ್ಸ್, ಪೆಟ್ರೋಲಿಂಗ್ ವಾಹನಗಳ ಪ್ರಸ್ತುತ ಸ್ಥಿತಿಗತಿ ಬಗ್ಗೆ ‌ಸಮಗ್ರ ಮಾಹಿತಿಯನ್ನು ನಿಗದಿತ ದಿನಾಂಕದೊಳಗೆ ನೀಡಬೇಕು ಹಾಗೂ ಪ್ರಯಾಣಕ್ಕೆ ಅಡಚಣೆಯಾಗುವ ಮರಗಳನ್ನು ತೆರವುಗೊಳಿಸುವಂತೆ ಸೂಚಿಸಿದರು.

2019ನೇ ಸಾಲಿನಲ್ಲಿ ಜಿಲ್ಲೆಯಲ್ಲಿ 680 ಜನ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವುದು ವರದಿಯಾಗಿದ್ದು, ಮುಂದಿನ ದಿನಗಳಲ್ಲಿ ಸಾವಿನ ಪ್ರಮಾಣ ಕಡಿತಗೊಳಿಸಲು ಎಲ್ಲಾ ಇಲಾಖೆಗಳು ಸಹಕಾರ ಮನೋಭಾವದಿಂದ ಕೆಲಸ ಮಾಡಬೇಕು ಜೊತೆಗೆ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತಾ ಕ್ರಮಗಳು ಮತ್ತು ನಿಯಮಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು. 

ಜಿಲ್ಲಾ ಪೊಲೀಸ್ ಅಧೀಕ್ಷಕ ರವಿ.ಡಿ.ಚನ್ನಣ್ಣನವರ್ ಮಾತನಾಡಿ, ಜಿಲ್ಲೆಯಲ್ಲಿ 60 ಅಪಘಾತ ವಲಯ(Block Spots)ಗಳನ್ನು ಗುರುತಿಸಲಾಗಿದ್ದು, ಅವುಗಳ ಪೈಕಿ 15 ಸ್ಥಳಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರಲ್ಲದೆ, ಜಿಲ್ಲೆಯಲ್ಲಿ ಪ್ರತಿ ದಿನ 2-3 ಅಪಘಾತ ಸಂಭವಿಸುತ್ತಿದ್ದು, ಮುಂದಿನ ವರ್ಷದೊಳಗೆ ಅಪಘಾತ ಪ್ರಮಾಣದಲ್ಲಿ ಶೇ.10 ರಷ್ಟು ಕಡಿಮೆ ಮಾಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು. 

ಉತ್ತರ ಕರ್ನಾಟಕದಿಂದ ರಾಜಧಾನಿಗೆ ಬರಲು ನೆಲಮಂಗಲ ಹೆಬ್ಬಾಗಿಲು ಆಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಟೋಲ್ ಸಿಬ್ಬಂದಿಗಳು ಯಾರೊಂದಿಗೂ ಅನುಚಿತವಾಗಿ ವರ್ತಿಸಬಾರದು ಎಂದರಲ್ಲದೆ, ಟೋಲ್‌ಗಳಲ್ಲಿ ಅಗತ್ಯವಿರುವ ಕಡೆ ಪೊಲೀಸ್ ಇಲಾಖೆಯಿಂದ ಹೋಮ್‌ಗಾರ್ಡ್‌ಗಳನ್ನು ನಿಯೋಜಿಸಿ ಭದ್ರತೆ ಒದಗಿಸಲಾಗುವುದು ಎಂದರು. 

ಪ್ರಮುಖ ಸ್ಥಳಗಳಲ್ಲಿ ಹೆದ್ದಾರಿ ಪ್ರಾಧಿಕಾರದಿಂದ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು, ಹೆದ್ದಾರಿಯಲ್ಲಿ ಜೀಬ್ರಾ ಪಟ್ಟಿ ಮಾರ್ಕಿಂಗ್, ಅಂಡರ್ ಪಾಸ್‌ಗಳಲ್ಲಿ ಸ್ವಚ್ಛತೆ ಕಾಪಾಡಬೇಕು ಹಾಗೂ ಶೀಘ್ರವೇ ಪಾದಚಾರಿಗಳು ಬಳಸಲು ಅನುವಾಗುವಂತೆ ಒಂದು ತಿಂಗಳ ಅವಧಿಯಲ್ಲಿ ಕಾರ್ಯ ಪೂರ್ಣಗೊಳಿಸಬೇಕು ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು. 

ಶಾಲಾ ವಾಹನಗಳಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳಬಾರದು. ಇದರಿಂದ ಮುಂದಿನ ದಿನಗಳಲ್ಲಿ ಆಗಬಹುದಾದ ಅನಾಹುತಗಳನ್ನು ತಪ್ಪಿಸಬಹುದು ಎಂದು ತಿಳಿಸಿದರು. 

ಹೆದ್ದಾರಿ ಪಕ್ಕದ ಡಾಬಾಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟವಾಗುತ್ತಿದ್ದು, ಇದರಿಂದ ಅಪಘಾತಗಳು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಬಕಾರಿ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಜೊತೆಗೆ ಅಪಘಾತ ಪ್ರಕರಣಗಳಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವ ಸಾಧ್ಯತೆ ಹೆಚ್ಚಾಗಿ ಇರುವುದರಿಂದ ಆರೋಗ್ಯ ಇಲಾಖೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿಗಳು ಅಪಘಾತ ಸಂಭವಿಸಿದ ವ್ಯಕ್ತಿಗಳನ್ನು ಪರೀಕ್ಷಿಸಿ ವರದಿಯನ್ನು ಶೀಘ್ರವಾಗಿ ನೀಡಬೇಕು ಎಂದರು. 

ಪೋಲಿಸ್ ಇಲಾಖೆ ವತಿಯಿಂದ ಟ್ರಾಕ್ಟರ್, ಎತ್ತಿನಗಾಡಿ ಮತ್ತು ಬಿಡಾಡಿ ದನಗಳಿಗೆ ರೇಡಿಯಂ ಸ್ಟಿಕ್ಕರ್ ಅಳವಡಿಸಲಾಗುವುದು ಇದರಿಂದ ಹೆಚ್ಚಿನ ಅಪಘಾತಗಳು ಸಂಭವಿಸದಂತೆ ತಡೆಯಲು ಸಹಾಯವಾಗುತ್ತದೆ ಎಂದು ತಿಳಿಸಿದರು. 

ಹೆದ್ದಾರಿಯಲ್ಲಿ ಅಗತ್ಯವಿರುವ ಕಡೆ ಸ್ಕೈವಾಕ್ ಗಳನ್ನು ನಿರ್ಮಿಸಬೇಕು ಹಾಗೂ ನಿಗದಿತ ನಿಲುಗಡೆ ಸ್ಥಳಗಳಲ್ಲಿ ಮಾತ್ರ ಸರ್ಕಾರಿ ಮತ್ತು ಬಸ್ಸುಗಳು ನಿಲ್ಲಿಸಬೇಕು ಎಂದು ಸಭೆಯಲ್ಲಿ ತಿಳಿಸಿದರು. 

ಸಭೆಯಲ್ಲಿ ಜಿಲ್ಲಾ ಪೋಲೀಸ್ ಉಪ ಅಧೀಕ್ಷಕ ಲಕ್ಷೀಗಣೇಶ್, ಡಿವೈಎಸ್ಪಿ ಟಿ.ರಂಗಪ್ಪ, ಆರ್.ಟಿ.ಓ ಅಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಶಿಕ್ಷಣದಲ್ಲಿ ಹೆಣ್ಣು ಮಕ್ಕಳು ಮುಂದು: ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

ಶಿಕ್ಷಣದಲ್ಲಿ ಹೆಣ್ಣು ಮಕ್ಕಳು ಮುಂದು: ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

ಸೈನ್ಯದಲ್ಲಿ , ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಮಹಿಳಾ ಕುಲದ ಪ್ರಗತಿಯ ಪ್ರತೀಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="111004"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!