
ಬೆಂ.ಗ್ರಾ.ಜಿಲ್ಲೆ: ನ್ಯಾಯಾಲಯಗಳಲ್ಲಿ ಇರುವ ಪ್ರಕರಣಗಳು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಮಾರ್ಚ್ 27 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮೆಗಾ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆರ್.ನಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಇಚ್ಚಿಸಿದ್ದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ/ತಾಲ್ಲೂಕು ಕಾನೂನು ಸೇವೆಗಳ ಸಮಿತಿಗಳಿಗೆ ಆನ್ ಲೈನ್/ ವಿಡಿಯೋ ಕಾನ್ಫರೆನ್ಸ್/ ಇ-ಮೇಲ್/ಎಸ್.ಎಂ.ಎಸ್/ವ್ಯಾಟ್ ಆಪ್/ಎಲೆಕ್ಟ್ರಾನಿಕ್ ಮೋಡ್/ಖುದ್ದಾಗಿ ಹಾಜರಾಗುವ ಮುಖಾಂತರ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬೇಕೆಂದು ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಸಂಬಂಧ ಪಟ್ಟ ಉಚ್ಚ ನ್ಯಾಯಾಲಯ ಕಾನೂನು ಸೇವೆಗಳ ಸಮಿತಿಯನ್ನು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲ್ಲೂಕು ಕಾನೂನು ಸೇವೆಗಳ ಸಮಿತಿಗಳನ್ನು ಅಥವಾ ಖಾಯಂ ಜನತ ನ್ಯಾಯಾಲಯಗಳನ್ನು ಆನ್ ಲೈನ್/ವಿಡಿಯೋ ಕಾನ್ಫರೆನ್ಸ್/ಇಮೇಲ್/ ಎಸ್.ಎಂ.ಎಸ್/ವ್ಯಾಟ್ಸ್ ಆಪ್/ಎಲೆಕ್ಟ್ರಾನಿಕ್/ಮೋಡ್ ಖುದ್ದಾಗಿ ಹಾಜರಾಗುವ ಮೂಲಕ ಸಂಪರ್ಕಿಸಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ.
ಸಾರ್ವಜನಿಕರು, ಮೆಗಾ ಲೋಕ ಅದಾಲತ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ತಮಗೆ ಸಂಬಂಧಪಟ್ಟ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಮುಂದಾಗಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆರ್.ನಟೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

