
ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯಿಂದ ದಿನ ಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದನ್ನ ಖಂಡಿಸಿ ಕರವೆ ಪ್ರವೀಣ್ ಕುಮಾರ್ ಶೆಟ್ಟಿ ಬಣದ ಕಾರ್ಯಕರ್ತರು ಸಿದ್ದಲಿಂಗಯ್ಯ ವೃತ್ತದಿಂದ ಬೈಕ್ಗಳನ್ನು ತಳ್ಳಿಕೊಂಡು ಖಾಲಿ ಸಿಲಿಂಡರ್ ಮೆರವಣಿಗೆ ಮಾಡಿ ತಾಲ್ಲೂಕು ಕಚೇರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಕರವೇ ಪ್ರವೀಣ್ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟರವಿ, ತಾಲೂಕು ಪ್ರಧಾನ ಕಾರ್ಯದರ್ಶಿ ಎಸ್.ಎಲ್.ಎನ್.ವೇಣು, ಕಳೆದ ವರ್ಷದಿಂದ ಇಡೀ ಜಗತ್ತನ್ನೆ ಕಾಡಿದ ಮಹಾಮಾರಿ ಕರೊನಾ ವೈರಸ್ ಭಾರತದ ಮಧ್ಯಮ ವರ್ಗದವರ ಪಾಲಿಗೆ ಸಹಿಸಲಾರದ ಪೆಟ್ಟು ನೀಡಿತ್ತು ಹಲವಾರು ಕಂಪನಿಗಳು ಬಾಗಿಲು ಮುಚ್ಚಿದ ಪರಿಣಾಮ ಕಾರ್ಮಿಕರು ನಿರುದ್ಯೋಗಿಗಳಾದರು. ವ್ಯಾಪಾರ, ವ್ಯವಹಾರ ನೆಲ ಕಚ್ಚಿದವು, ದಿನಗೂಲಿ ನೌಕರರು ಊಟಕ್ಕು ಪರದಾಡುವಂತಾಗಿದೆ. ಇಂತಹ ಸಮಯದಲ್ಲಿ ಜನರ ಸಹಾಯಕ್ಕೆ ಬರಬೇಕಿದ್ದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಗಾಯದ ಮೇಲೆ ಬರೆ ಎಳೆದಂತೆ ಡಿಸೇಲ್, ಪೆಟ್ರೋಲ್ ಹಾಗೂ ಅಡುಗೆ ಅನಿಲ ಬೆಲೆಗಳನ್ನು ಸತತವಾಗಿ ಏರಿಸುತ್ತಿವೆ. ಗ್ಯಾಸ್ ಮೇಲಿನ ಸಬ್ಸಿಡಿ ರದ್ದುಗೊಳಿಸಿದಲ್ಲದೆ, 50ರೂ ಹೆಚ್ಚು ಮಾಡಿರುವ ಪರಿಣಾಮ ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರಿ ಮಧ್ಯಮ ವರ್ಗದ ಹಾಗೂ ಕಡುಬಡತನದಲ್ಲಿರುವ ಜನತೆಯ ಬದುಕು ನಡೆಸಲು ಅಸಾಧ್ಯವಾದಂತ ದುಸ್ತರ ಸ್ಥಿತಿ ನಿರ್ಮಾಣವಾಗಿದ್ದು ಕೂಡಲೇ ಸರ್ಕಾರಗಳು ಜನ ವಿರೋಧಿ ಬೆಲೆ ಏರಿಕೆಗೆ ಕಡಿವಾಣ ಹಾಕಿ ಜನರ ಮೇಲಿನ ಹೊರೆಯನ್ನು ಕಡಿಮೆ ಮಾಡಬೇಕೆಂದು ಒತ್ತಾಯಿಸಿದರು.
ತಾಲೂಕು ಅಧ್ಯಕ್ಷ ಹಮಾಮ್ ವೆಂಕಟೇಶ್ ಮಾತನಾಡಿ, ಕೇಂದ್ರ ಸರ್ಕಾರದ ಮೇಲಿನ ಭರವಸೆಯಿಂದ ಎರಡನೇ ಬಾರಿಗೆ ಅತಿ ಹೆಚ್ಚು ಮತಗಳನ್ನು ನೀಡಿ ಅಧಿಕಾರ ನೀಡಲಾಯಿತು. ಆದರೆ ಇತ್ತೀಚಿನ ನಡುವಳಿಕೆ ಜನರನ್ನು ಭ್ರಮ ನಿರಸರನ್ನಾಗಿಸುತ್ತಿದೆ. ನಾವೂ ಕೂಡ ಮೋದಿ ಅಭಿಮಾನಿಗಳೇ. ಆದರೆ ಮಾಡಿದನ್ನೆಲ್ಲ ಸರಿ ಏನ್ನುವ ಅಂದಾಭಿಮಾನವಲ್ಲ. ಕೂಡಲೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಹಚ್ಚೆತ್ತುಕೊಳ್ಳಬೇಕೆಂದರು.
ನಗರಸಭೆ ಮಾಜಿ ಅಧ್ಯಕ್ಷ ತ.ನ.ಪ್ರಭುದೇವ, ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ತಾಲೂಕು ಅಧ್ಯಕ್ಷ ಸು.ನರಸಿಂಹ ಮೂರ್ತಿ ಮಾತನಾಡಿ, ಕರೊನಾ ಸಂಕಷ್ಟದಿಂದ ನರಳಿ, ಉದ್ಯೋಗದಿಂದ ವಂಚಿತರಾದ ಕಷ್ಟದ ನಡುವೆ, ಅಗತ್ಯ ವಸ್ತುಗಳ ಈ ಬೆಲೆ ಏರಿಕೆ ಬಿಸಿ ಜನ ಸಾಮಾನ್ಯರನ್ನು ತೀವ್ರ ಸಂಕಷ್ಟಕ್ಕೆ ತಳ್ಳಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಿಂದ ಇತರ ವಸ್ತುಗಳ ಬೆಲೆ ಸಹ ತೀವ್ರವಾಗಿ ಏರಿಕೆಯಾಗಿ, ಜನ ಸಾಮಾನ್ಯ ಜೀವನವನ್ನ ಬುಡಮೇಲು ಮಾಡುತ್ತಿದೆ. ರಾಜಕೀಯ ಉದ್ದೇಶಕ್ಕೆ ಜನವಿರೋಧಿ ನೀತಿ ಮೂಲಕ ಉದ್ದಟ್ಟತನ ತೋರುತ್ತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಈ ರೀತಿಯ ಆಂದೋಲನ ಮೂಲಕ ಜನತೆಯನ್ನು ಜಾಗೃತರಾಗಬೇಕಿದೆ ಎಂದು ಮನವಿ ಮಾಡಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿದ ಪ್ರತಿಭಟನಾ ನಿರತರು, ತಹಶಿಲ್ದಾರ್ ಟಿ.ಎಸ್.ಶಿವರಾಜ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ರಮೇಶ್ ವಿರಜ್, ಗೌರವಾಧ್ಯಕ್ಷ ಪು.ಮಹೇಶ್, ಖಜಾಂಚಿ ಆನಂದ್, ಸಂಚಾಲಕ ಕಾರಹಳ್ಳಿ ಮಂಜು ಕಾರ್ಯಾಧ್ಯಕ್ಷ ಮಹೇಶ್, ಜಿಲ್ಲಾ ಅನಗರ ಅಧ್ಯಕ್ಷ ಬಶೀರ್, ಯಲಹಂಕ ಅಧ್ಯಕ್ಷ ಜಯಂತ್, ರಾಖಿ, ಸುನಿ ಲ, ಟಾಟಾಸುನಿ, ಲೋಕೇಶ್ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

