ಫೆ.19 ಮತ್ತು 20ರಂದು ದೊಡ್ಡಬಳ್ಳಾಪುರದಲ್ಲಿ ಬೆಂ.ಗ್ರಾ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಭರದ ಸಿದ್ಧತೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ 22ನೇ ಕನ್ನಡ ಸಾಹಿತ್ಯ ಸಮ್ಮೇಳನ ಫೆ.19 ಮತ್ತು 20ರಂದು ನಗರದ ಬಸವ ಭವನದಲ್ಲಿ ಹಿರಿಯ ಕನ್ನಡಪರ ಹೋರಾಟಗಾರ ತ.ನ.ಪ್ರಭುದೇವ್ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿದೆ.

ಕಳೆದ ವರ್ಷ ಮಾರ್ಚ್ 16 ಮತ್ತು 17ರಂದು ನಡೆಯಬೇಕಿದ್ದ ಸಮ್ಮೇಳನ ಕೊವಿಡ್ ಕಾರಣದಿಂದಾಗಿ ಮುಂದೂಡಲಾಗಿತ್ತು. ಈ ನಡುವೆ ಜಿಲ್ಲೆಯ 22ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯದೇ 23ನೇ ಸಮ್ಮೇಳನವನ್ನು  ಜ.3 ಮತ್ತು 4ರಂದು ವಿಜಯಪುರದಲ್ಲಿ ನಡೆಸಿದ ಜಿಲ್ಲಾಧ್ಯಕ್ಷರ ಮೇಲೆ ತಾಲೂಕಿನ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ತದ ನಂತರ 22 ನೇ ಸಾಹಿತ್ಯ ಸಮ್ಮೇಳನವನ್ನು ನಡೆಸಲು ಇದ್ದ ಗೊಂದಲಗಳು ಬಗೆಹರಿದಿದೆ.

ಸಮ್ಮೇಳನದ ಕುರಿತು ಮಾಹಿತಿ ನೀಡಿರುವ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷೆ ಪ್ರಮೀಳಾ ಮಹಾದೇವ್, ಫೆ. 19 ಮತ್ತು 20ರಂದು ನಗರದ ಬಸವ ಭವನದಲ್ಲಿ ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು ಭಾಗವಹಿಸಲಿವೆ. ಸಮ್ಮೇಳನದಲ್ಲಿ ಭಾಗವಹಿಸುವ ಶಿಕ್ಷಕರಿಗೆ ಅನ್ಯ ಕಾರ್ಯ ನಿಮಿತ್ತ ರಜಾ ಸೌಲಭ್ಯವಿದೆ.ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳ ಕಾರ್ಯಕರ್ತರಿಗೆ ಆಹ್ವಾನ ನೀಡಲಾಗಿದ್ದು, ಎಲ್ಲಾ ಕನ್ನಡಪರ ಮನಸ್ಸುಗಳು ಸಮ್ಮೇಳನದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.

ಸಮ್ಮೇಳನದ ಕಾರ್ಯಕ್ರಮಗಳು: ಫೆ.19ರಂದು ಬೆಳಗ್ಗೆ 8 ಕ್ಕೆ ಬಸವಭವನದಲ್ಲಿ ಧ್ವಜಾರೋಹಣ ನಡೆಯಲಿದೆ. 8.30 ಕ್ಕೆ ನಗರದ ಜಯಚಾಮರಾಜೇಂದ್ರ ವೃತ್ತದ ಬಳಿಯ ಡಾ.ರಾಜ್‍ಕುಮಾರ್ ಪ್ರತಿಮೆ ಮುಂಭಾಗದಿಂದ ಸಮ್ಮೇಳನಾಧ್ಯಕ್ಷರ ಮೆರವಣಿಗೆ ವಿವಿಧ ಕಲಾತಂಡಗಳೊಂದಿಗೆ ನಡೆಯಲಿದೆ.

ಬೆಳಿಗ್ಗೆ 11ಗಂಟೆಗೆ ಉದ್ಘಾಟನೆ ಸಮಾರಂಭ ನಡೆಯಲಿದ್ದು, ಕಂದಾಯ ಸಚಿವ ಆರ್.ಅಶೋಕ್ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಶಾಸಕ ಟಿ.ವೆಂಕಟರಮಣಯ್ಯ   ಅಧ್ಯಕ್ಷತೆ ವಹಿಸಲಿದ್ದಾರೆ. ಕವಿ ಡಾ.ಸಿದ್ದಲಿಂಗಯ್ಯ, ಕೇಂದ್ರದ ಮಾಜಿ ಸಚಿವ ಆರ್.ಎಲ್.ಜಾಲಪ್ಪ, ಪೌರಾಡಳಿತ ಸಚಿವ ಎಂ.ಟಿ.ಬಿ.ನಾಗರಾಜ್, ಸಂಸದ ಬಿ.ಎನ್.ಬಚ್ಚೇಗೌಡ, ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ, ಚಿತ್ರನಟಿ ಭವ್ಯ, ಕಸಾಪ  ರಾಜ್ಯಾಧ್ಯಕ್ಷ ಮನು ಬಳಿಗಾರ್ ಮೊದಲಾದವರು ಭಾಗವಹಿಸಲಿದ್ದಾರೆ.

ಮಧ್ಯಾಹ್ನ 2 ಗಂಟೆಗೆ ಚಿಂತಕ ಪ್ರೋ. ಎಂ.ಜಿ.ಚಂದ್ರಶೇಖರಯ್ಯ ಅಧ್ಯಕ್ಷತೆಯಲ್ಲಿ ನಾಡು ನುಡಿ ಸಂಸ್ಖೃತಿ ಕುರಿತ ವಿಚಾರ ಗೋಷ್ಟಿ ನಡೆಯಲಿದೆ. ಪತ್ರಕರ್ತ ರಮಾಕಾಂತ್ ಕನ್ನಡ ಚಳವಳಿ ಮತ್ತು ಮಾಧ್ಯಮ ಕುರಿತು, ಪತ್ರಕರ್ತ ಎಂ.ಜೆ.ರಾಜಶೇಖರ ಶೆಟ್ಟಿ ದೊಡ್ಡಬಳ್ಳಾಪುರದಲ್ಲಿ ಕನ್ನಡ ಚಳವಳಿಯ ಇತಿಹಾಸ ಕುರಿತು, ಉಪನ್ಯಾಸಕ ಹುಲಿಕುಂಟೆ ಮೂರ್ತಿ ಒಂದು ಭಾಷೆಯಾಗಿ ಕನ್ನಡದ ಅನನ್ಯತೆ ಕುರಿತು, ಪ್ರಾಧ್ಯಾಪಕ ಡಾ.ಜಿ.ಗಂಗರಾಜು ಕನ್ನಡ ಸಾಹಿತ್ಯ ಮತ್ತು ಮಹಿಳೆ ಕುರಿತು ಮಾತನಾಡಲಿದ್ದಾರೆ.

ಸಂಜೆ 4 ಗಂಟೆಗೆ ಚಿಂತಕ ಮಾಜಿ ಸಚಿವೆ ರಾಣಿ ಸತೀಶ್ ಅವರ ಅಧ್ಯಕ್ಷತೆಯಲ್ಲಿ ಕನ್ನಡ, ಮಹಿಳೆ ಮತ್ತು ಮಕ್ಕಳು ಕುರಿತ ವಿಚಾರ ಗೋಷ್ಠಿ ನಡೆಯಲಿದೆ.

ಸಾಹಿತಿ ಡಾ.ವಿ.ಎನ್.ರಮೇಶ್ ಕನ್ನಡ ಮಾಧ್ಯಮ ಶಾಲೆ ಉಳಿವಿನಲ್ಲಿ ಮಹಿಳೆ ಪಾತ್ರ ಕುರಿತು, ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಮಿಲನ ಕೆ.ಭರತ್ ಜಾನಪದ ಸಂಸ್ಕೃತಿ ಮತ್ತು ಮಹಿಳೆ ಕುರಿತು, ನಟಿ ಸೌಮ್ಯ ಸಮಾಜ ಮತ್ತು ಲಿಂಗ ತಾರತಮ್ಯ ಕುರಿತು, ಹುಸ್ಕೂರು ಮಂಜುಳ ರೈತ ಮಹಿಳೆ ಮತ್ತು ಸವಾಲುಗಳು ಕುರಿತು ಮಾತನಾಡಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]