ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ನಿಕಟಪೂರ್ವ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರನ್ನು ಸನ್ಮಾನಿಸಿ ಆತ್ಮೀಯವಾಗಿ ಬೀಳ್ಗೊಡಲಾಯಿತು. ಹಾಗೂ ನೂತನ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಸನ್ಮಾನ ಮಾಡುವ ಮೂಲಕ ಗೌರವಿಸಲಾಯಿತು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ, ಉಪ ವಿಭಾಗಾಧಿಕಾರಿ ಅರುಳ್‌ಕುಮಾರ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವಿಜಯ್‌ಕುಮಾರ್, ದೊಡ್ಡಬಳ್ಳಾಪುರ ತಹಶಿಲ್ದಾರ್ ಟಿ.ಎಸ್.ಶಿವರಾಜ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಕಂದಾಯ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…