
ದೊಡ್ಡಬಳ್ಳಾಪುರ: ತಾಲೂಕಿನ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಹುಲುಕುಡಿಬೆಟ್ಟದಲ್ಲಿ ವೀರಭದ್ರಸ್ವಾಮಿ ಮತ್ತು ಭದ್ರಕಾಳಮ್ಮ ದೇವರ 40ನೇ ವರ್ಷದ ಜಾತ್ರಾ ಮಹೋತ್ಸವ ಇಂದು ವಿಜೃಂಬಣೆಯಿಂದ ನಡೆಯಲಿದೆ.
ಕಾರ್ಯಕ್ರಮದ ವಿವರ: ಬೆಳಗ್ಗೆ ಬ್ರಾಹ್ಮಿ ಮಹೊರ್ತದಲ್ಲಿ ಮೂಲದೇವರಿಗೆ ರುದ್ರಾಭಿಷೇಕದ ಮೂಲಕ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.
ಬೆಳ್ಳಿಗ್ಗೆ 10.30ಕ್ಕೆ ರಥಾಂಗ ಹೋಮ, 11.30ಕ್ಕೆ ಬಾಲ್ಯ ವಿವಾಹ ತಡೆ ಕಾನೂನು ಅರಿವು ಕಾರ್ಯಕ್ರಮ, ಮದ್ಯಾಹ್ನ 12-5 ಮಹಾರಥೋತ್ಸವ ನಡೆಯಲಿದೆ. ಕಾರ್ಯಕ್ರಮದ ಸಾನಿದ್ಯವನ್ನು ಚಿಕ್ಕಬಳ್ಳಾಪುರದ ಅದಿಚುಂಚನಗಿರಿ ಶಾಖಾ ಮಠ ಶ್ರೀ ಮಂಗಳಾನಂದ ಮಹಾಸ್ವಾಮಿಗಳು ವಹಿಸಲಿದ್ದಾರೆ. ಶಾಸಕ ಟಿ.ವೆಂಕಟರಮಣಯ್ಯ ಆದಿಯಾಗಿ ವಿವಿಧ ಪಕ್ಷಗಳ ಮುಖಂಡರು, ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ಮಧ್ಯಾಹ್ನ 1ಗಂಟೆಗೆ ಅನ್ನಸಂತರ್ಪಣೆ ನಡೆಯಲಿದೆ. ಜಾತ್ರೆಯ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದಿಂದ ಹುಲುಕುಡಿ ಬೆಟ್ಟಕ್ಕೆ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಎಂದು ಶ್ರೀ ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರಾಭಿವೃದ್ದಿ ಟಸ್ಟ್ ನಿರ್ದೇಶಕ ಚನ್ನೆಗೌಡ, ವಕ್ತಾರ ಕೀರ್ತಿಭೈರೇಗೌಡ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

