ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಸಾಸಲು ಹೋಬಳಿಯ ಹೊಸಹಳ್ಳಿಯಲ್ಲಿ ಇಂದು “ಜಿಲ್ಲಾಧಿಕಾರಿಗಳ ನಡೆ, ಹಳ್ಳಿಯ ಕಡೆ” ಎಂಬ ರಾಜ್ಯ ಮಟ್ಟದ ವೇದಿಕೆ ಕಾರ್ಯಕ್ರಮವನ್ನು ಜ್ಯೋತಿ ಬೆಳಗುವ ಮೂಲಕ ಕಂದಾಯ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಅಶೋಕ್ ಉದ್ಘಾಟಿಸಿದರು.
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ, ಜಿಲ್ಲಾ ಪಂಚಾಯಿತಿ ಸದಸ್ಯೆ ಜಯಮ್ಮ, ದೊಡ್ಡಬಳ್ಳಾಪುರ ತಾಲ್ಲೂಕು ಯೋಜನಾ ಪ್ರಾಧಿಕಾರದ ಅಧ್ಯಕ್ಷ ದಿಬ್ಬೂರು ಜಯಣ್ಣ, ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ನವೀನ್‌ರಾಜ್‌ಸಿಂಗ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಜಿಲ್ಲಾ ಪೊಲೀಸ್ ಅಧೀಕ್ಷಕ ರವಿ.ಡಿ.ಚನ್ನಣ್ಣನವರ್, ಅಪರ ಜಿಲ್ಲಾಧಿಕಾರಿ ಜಗದೀಶ್.ಕೆ.ನಾಯಕ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಲಕ್ಷ್ಮೀ ಗಣೇಶ್, ಉಪ ವಿಭಾಗಾಧಿಕಾರಿ ಅರುಳ್ ಕುಮಾರ್, ದೊಡ್ಡಬಳ್ಳಾಪುರ ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಪಂ ಅಧ್ಯಕ್ಷ ನಾರಾಯಣಗೌಡ, ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…