ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹಳ್ಳಿಯಲ್ಲಿ ಇಂದು “ಜಿಲ್ಲಾಧಿಕಾರಿಗಳ ನಡೆ, ಹಳ್ಳಿಯ ಕಡೆ” ಎಂಬ ವಿನೂತನ ಕಾರ್ಯಕ್ರಮದ ಅಂಗವಾಗಿ ಕಂದಾಯ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ಅವರು ಹೊಸಹಳ್ಳಿ ಗ್ರಾಮದೇವತೆ ಮಾರಮ್ಮ ದೇವಸ್ಥಾನದ ಆವರಣದಲ್ಲಿ ದಲಿತ ಕಾಲೋನಿ ಗ್ರಾಮಸ್ಥರೊಂದಿಗೆ ಸಭೆ ನಡೆಸಿ, ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು.
ಈ ವೇಳೆ ಸಾರ್ವಜನಿಕರ ಸಮಸ್ಯೆ ಆಲಿಸಿ ವಸತಿ ಹೀನರಿಗೆ ಸರ್ವೆನಂ 55ರಲ್ಲಿ 5ಎಕರೆ ಜಮೀನನ್ನು ಆಶ್ರಯ ಸಮಿತಿಗೆ ನೀಡಿದ್ದು ಶಾಸಕ ಟಿ.ವೆಂಕಟರಮಣಯ್ಯ ಅಧ್ಯಕ್ಷತೆಯ ಸಮಿತಿ ಅರ್ಹರ ಗುರುತಿಸಿ ವಸತಿ ಸೌಲಭ್ಯ ನೀಡಲು ಸೂಚಿಸಿದರು.
ನಂತರ ಗ್ರಾಮದ ವಿಕಲಚೇತನರ ಮನೆಗಳಿಗೆ ಭೇಟಿ ನೀಡಿ, ವಿವಿಧ ಸಾಧನ ಸಲಕರಣೆಗಳನ್ನು ವಿತರಣೆ ಮಾಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಜಿಲ್ಲಾ ಪೊಲೀಸ್ ಅಧೀಕ್ಷಕ ರವಿ.ಡಿ.ಚನ್ನಣ್ಣನವರ್, ಅಪರ ಜಿಲ್ಲಾಧಿಕಾರಿ ಜಗದೀಶ್.ಕೆ.ನಾಯಕ್, ತಾಪಂ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…