ದೊಡ್ಡಬಳ್ಳಾಪುರ: ಹೊಸಹಳ್ಳಿಯಲ್ಲಿ ನಡೆಯುತ್ತಿರುವ “ಜಿಲ್ಲಾಧಿಕಾರಿಗಳ ನಡೆ, ಹಳ್ಳಿಯ ಕಡೆ” ಎಂಬ ರಾಜ್ಯ ಮಟ್ಟದ ವಿನೂತನ ಕಾರ್ಯಕ್ರಮದ ಅಂಗವಾಗಿ ಕಂದಾಯ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಆರ್.ಅಶೋಕ್ ಹೊಸಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. ಈ ವೇಳೆ ಡಾ.ಶ್ವೇತಾನಾಯಕ್ ಸಚಿವರ, ಆರೋಗ್ಯ ತಪಾಸಣೆ ಮಾಡಿದರು.
ಇದೇ ವೇಳೆ ಆಸ್ಪತ್ರೆಯ ಹಿಂಭಾಗ ಗಿಡ ನೆಟ್ಟು, ನೀರುಣಿಸಿದರು. ಶಾಸಕ ಟಿ.ವೆಂಕಟರಮಣಯ್ಯ, ತಾಪಂ ಮಾಜಿ ಅಧ್ಯಕ್ಷ ಹೆಚ್.ಎಸ್.ಅಶ್ವಥ್ ನಾರಾಯಣಕುಮಾರ್, ಮುಖಂಡರಾದ ಶಿವಾನಂದರೆಡ್ಡಿ, ವೆಂಕಟರಾಮರೆಡ್ಡಿ, ಮಂಜುನಾಥರೆಡ್ಡಿ, ಡಾ.ಶ್ವೇತಾನಾಯಕ್ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…