
ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹಳ್ಳಿಯಲ್ಲಿ ಇಂದು “ಜಿಲ್ಲಾಧಿಕಾರಿಗಳ ನಡೆ, ಹಳ್ಳಿಯ ಕಡೆ” ಎಂಬ ವಿನೂತನ ಕಾರ್ಯಕ್ರಮದ ಅಂಗವಾಗಿ ಕಂದಾಯ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ, ಜಿಲ್ಲಾಧಿಕಾರಿ ಶ್ರೀನಿವಾಸ್, ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಗ್ರಾಮಸ್ಥರು ತಳಿರು ತೋರಣ ಹಾಗೂ ಹೂಗಳಿಂದ ಸಿಂಗರಿಸಿದ ಎತ್ತಿನಗಾಡಿಯಲ್ಲಿ ಕರೆತಂದರು.
ಅತಿಥಿಗಳಿಗೆ ಗ್ರಾಮದ ಮಹಿಳೆಯರು ಪೂರ್ಣಕುಂಬ ಸ್ವಾಗತ ಕೋರಿದರು. ತಮಟೆ, ಮಂಗಳವಾದ್ಯ ವಾದನದ ಮೂಲಕ ವೇದಿಕೆ ಕರೆತರಲಾಗುತ್ತಿದೆ.
ಇದಕ್ಕುಮುನ್ನ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ, ಡಿಸಿ ಶ್ರೀನಿವಾಸ್, ಶಾಸಕ ಟಿ.ವೆಂಕಟರಮಣಯ್ಯ ಭಾಗಿಯಾದರು.
ಗ್ರಾಮದೇವತೆ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಗ್ರಾಮಸ್ಥರೊಂದಿಗೆ ಸಭೆ ನಡೆಸಿ, ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದ ಕುರಿತು ಮಾಹಿತಿ ನೀಡುತ್ತಿದ್ದು, ಗ್ರಾಮಸ್ಥರು ಅಹವಾಲು ಸಲ್ಲಿಸುತ್ತಿದ್ದಾರೆ. ಕೆಲವೇ ಕ್ಷಣಗಳಲ್ಲಿ ವೇದಿಕೆ ಕಾರ್ಯಕ್ರಮ ಆರಂಭವಾಗಲಿದೆ.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಜಿಲ್ಲಾ ಪೊಲೀಸ್ ಅಧೀಕ್ಷಕ ರವಿ.ಡಿ.ಚನ್ನಣ್ಣನವರ್, ಅಪರ ಜಿಲ್ಲಾಧಿಕಾರಿ ಜಗದೀಶ್.ಕೆ.ನಾಯಕ್, ತಾಪಂ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

