ದೊಡ್ಡಬಳ್ಳಾಪುರ: ಗುಲಾಬಿ ಕಾರ್ಖಾನೆಯಲ್ಲಿ ಭದ್ರತಾ ಕಾರ್ಯ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿಯ ದ್ವಿಚಕ್ರ ವಾಹನಕ್ಕೆ ಸರ್ಕಾರಿ ಸಾರಿಗೆ ಇಲಾಖೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ತಾಲೂಕಿನ ದೊಡ್ಡಬೆಳವಂಗಲ ಸಮೀಪದ ಅಜ್ಜನಕಟ್ಟೆ ಬಳಿ ಸಂಭವಿಸಿದೆ.
ಮೃತರನ್ನು ಬೆಟ್ಟದ ಸೊಣ್ಣೆನಹಳ್ಳಿ ನಿವಾಸಿ ನಂಜುಂಡಪ್ಪ (50)ಎಂದು ಗುರುತಿಸಲಾಗಿದ್ದು, ಅಜ್ಜನಕಟ್ಟೆ ಸಮೀಪದ ಗುಲಾಬಿ ಕಾರ್ಖಾನೆಯಲ್ಲಿ ರಾತ್ರಿ ಪಾಳಿಯ ಸೆಕ್ಯುರಿಟಿ ಕೆಲಸ ಮುಗಿಸಿನೆ ಮರಳುವ ವೇಳೆ ಘಟನೆ ಸಂಭವಿಸಿದೆ.
ಘಟನೆ ಕುರಿತು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.