ಹೊಸಹಳ್ಳಿ ಗ್ರಾಮ ವಾಸ್ತವ್ಯದಲ್ಲಿ ನವ ಬೆಂಗಳೂರು ಕೂಗು / ಕಂದಾಯ ಸಚಿವ ಆರ್.ಅಶೋಕ್ಗೆ ಮನವಿ ಸಲ್ಲಿಸಿದ ನವ ಬೆಂಗಳೂರು ಹೋರಾಟ ಸಮಿತಿ

ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೇಂದ್ರ ಘೋಷಣೆ ವಿವಾದದ ಬೆನ್ನಲ್ಲೇ ಜಿಲ್ಲೆಯ ನಾಲ್ಕೂ ತಾಲ್ಲೂಕುಗಳಿಗೆ ಸಮಾನ ನ್ಯಾಯ ಹಾಗೂ ಆರ್ಥಿಕ ಅಭಿವೃದ್ಧಿಯ ಕಾರಣ ಬೆಂಗಳೂರು ನಗರಕ್ಕೆ ಪರ್ಯಾಯವಾಗಿ ಗ್ರಾಮಾಂತರ ಜಿಲ್ಲೆಯನ್ನು “ನವ ಬೆಂಗಳೂರು” ಎಂದು ಘೋಷಣೆ ಮಾಡಿ ಅಭಿವೃದ್ಧಿಪಡಿಸಬೇಕೆಂಬ ಹೋರಾಟ ಚುರುಕು ಪಡೆದಿದ್ದು, ‘ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದ ನಿಮಿತ್ತ ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ವಾಸ್ತವ್ಯ ಹೂಡಿರುವ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ಅವರಿಗೆ ನವ ಬೆಂಗಳೂರು ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು.

ಮನವಿ ಸಲ್ಲಿಸಿ ಮಾತನಾಡಿದ “ನವ ಬೆಂಗಳೂರು ಹೋರಾಟ ಸಮಿತಿಯ ಮುಖಂಡ ಜಿ.ಎನ್.ಪ್ರದೀಪ್, ಕಿರಿದಾದ ಭೌಗೋಳಿಕ ಪ್ರದೇಶ ಹಾಗೂ ಮಿತಿಮೀರಿದ ಜನಸಂಖ್ಯೆಯ ಕಾರಣ ಪ್ರಸ್ತುತ ಬೆಂಗಳೂರು ನಗರದಲ್ಲಿ ವಿಪರೀತ ಟ್ರಾಫಿಕ್ ಸಮಸ್ಯೆ, ಪರಿಸರ ಮಾಲಿನ್ಯ ಹಾಗೂ ಹೂಡಿಕೆದಾರರ ನಿರಾಸಕ್ತಿ ಹೆಚ್ಚಾಗಿದ್ದು, ಬೆಂಗಳೂರು ನಗರದ ಅಭಿವೃದ್ಧಿ ಕುಂಠಿತವಾಗಿದೆ. ಆದ್ದರಿಂದ ಬೆಂಗಳೂರು ನಗರಕ್ಕೆ ಪರ್ಯಾಯವಾಗಿ ಇನ್ನೊಂದು ಪರ್ಯಾಯ ನಗರದ ಅನಿವಾರ್ಯತೆ ರಾಜ್ಯಕ್ಕಿದ್ದು, ನಗರಕ್ಕೆ ಹೊಂದಿಕೊಂಡಂತಿರುವ ನಮ್ಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಪರ್ಯಾಯ ನಗರವಾಗಲು ಬೇಕಾದ ಎಲ್ಲಾ ಅರ್ಯತೆಗಳನ್ನೂ ಹೊಂದಿದ್ದು, ಮುಂಬರುವ ರಾಜ್ಯ ಬಜೆಟ್‌ನಲ್ಲಿ  ನಮ್ಮ ಜಿಲ್ಲೆಯನ್ನು “ನವ ಬೆಂಗಳೂರು” ಎಂದು ಘೋಷಿಸಿ ವಿಶೇಷ ಅನುದಾನದಡಿಯಲ್ಲಿ ಅಭಿವೃದ್ಧಿಪಡಿಸಬೇಕು ಎಂದು ಮಾನ್ಯ ಉಸ್ತುವಾರಿ ಸಚಿವರಿಗೆ ಮನವರಿಕೆ ಮಾಡಿ ಮನವಿ ಸಲ್ಲಿಸಿದ್ದೇವೆ ಎಂದರು.

ನಮ್ಮ ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆಂದು ಹೇಳಿದ್ದಾರೆ. ಸಚಿವರ ಹಾಗೂ ಮುಖ್ಯಮಂತ್ರಿಗಳ ಮೇಲೆ ನಮಗೆ ಭರವಸೆ ಇದೆ. ಹಾಗೇನಾದರೂ ಮುಂದಿನ ದಿನಗಳಲ್ಲಿ ಸರ್ಕಾರವು ಈ ಬಗ್ಗೆ ನಿರ್ಲಕ್ಷ್ಯ ಮಾಡಿದರೆ, ನಮ್ಮ ನಾಯಕರಾದ ಕೆ.ವಿ.ಸತ್ಯ ಪ್ರಕಾಶ್ ರವರ ನೇತೃತ್ವದಲ್ಲಿ ಹೋರಾಟ ಮುಂದುವರೆಸಲಾಗುವುದು ಎಂದು ಹೇಳಿದರು.

ನಂತರ ಮಾತನಾಡಿದ ಮುಖಂಡ ಕೆ.ವಿ.ಸತ್ಯಪ್ರಕಾಶ್, ನಮ್ಮ ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಹಾಗೂ ರಾಜ್ಯದ ಆರ್ಥಿಕ ಭವಿಷ್ಯದ ದೃಷ್ಟಿಯಿಂದ “ನವ ಬೆಂಗಳೂರು” ಘೋಷಣೆ ಅನಿವಾರ್ಯವಾಗಿದ್ದು, ಈಗಾಗಲೇ ಜಿಲ್ಲೆಯ ನಾಲ್ಕೂ ಶಾಸಕರ ಬಳಿ ವಿಚಾರ ಪ್ರಸ್ತಾಪಿಸಿ ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ನಡೆಸಿದ್ದೇವೆ. ಇಡೀ ಜಿಲ್ಲೆಯ ಜನಪ್ರತಿನಿಧಿಗಳು, ಮುಖಂಡರು, ಹೋರಾಟಗಾರರು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಒಗ್ಗಟ್ಟಾಗಿ ಹೋರಾಟ ನಡೆಸಿ “ನವ ಬೆಂಗಳೂರು” ಪರಿಕಲ್ಪನೆಯನ್ನು ಸಾಕಾರ ಮಾಡಿಕೊಳ್ಳುತ್ತೇವೆ” ಎಂದರು.

ಸಚಿವರ ಜೊತೆಯಿದ್ದ ದೊಡ್ಡಬಳ್ಳಾಪುರ ಶಾಸಕ ಟಿ.ವೆಂಕಟರಮಣಯ್ಯ ಜಿಲ್ಲೆಯ ಹಾಗೂ ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ “ನವ ಬೆಂಗಳೂರು” ಪರಿಕಲ್ಪನೆಯ ಅನುಷ್ಠಾನ ಅವಶ್ಯವಿದೆ ಎನ್ನುವ ಮೂಲಕ “ನವ ಬೆಂಗಳೂರು ಹೋರಾಟ ಸಮಿತಿ” ಗೆ ಬೆಂಬಲ ವ್ಯಕ್ತಪಡಿಸಿದರು.

ಈ ವೇಳೆ ಮುಖಂಡರಾದ ಸಿ.ಕೆ.ದಯಾನಂದ್, ಕೆ.ನಾಗೇಶ್,ಆನಂದ್ ದೊಡ್ಡತುಮಕೂರು, ಎಂ.ಹರ್ಷ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ. ಸುರೇಶ್

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ. ಸುರೇಶ್

"ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ (ಡಿ.ಕೆ. ಶಿವಕುಮಾರ್) ಸಿಎಂ ಆಗುತ್ತಾರೆ. ಹಣೆಬರಹ ಇಲ್ಲ ಎಂದರೆ ಯಾರೂ ಏನೂ ಮಾಡಲು ಆಗುವುದಿಲ್ಲ" ಎಂದು ಬಮೂಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ (D.K. Suresh) ಅವರು ತಿಳಿಸಿದರು.

[ccc_my_favorite_select_button post_id="119818"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!