ಬೆಂ.ಗ್ರಾ.ಜಿಲ್ಲೆ: ದೊಡ್ಡಬಳ್ಳಾಪುರ ತಾಲ್ಲೂಕಿನ ಸಾಸಲು ಹೋಬಳಿಯ ಹೊಸಹಳ್ಳಿಯಲ್ಲಿಂದು “ಜಿಲ್ಲಾಧಿಕಾರಿಗಳ ನಡೆ, ಹಳ್ಳಿಯ ಕಡೆ” ಎಂಬ ರಾಜ್ಯ ಮಟ್ಟದ ವಿನೂತನ ಕಾರ್ಯಕ್ರಮದ ಅಂಗವಾಗಿ ಕಂದಾಯ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಅಶೋಕ್ ಮತ್ತು ಶಾಸಕ ಟಿ.ವೆಂಕಟರಮಣಯ್ಯ ಅವರು ಹೊಸಹಳ್ಳಿಯ ಸಮಾಜ ಕಲ್ಯಾಣ ಇಲಾಖೆಯ ಬಾಲಕರ ಹಾಸ್ಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದರು.
ಸಮಾಜ ಕಲ್ಯಾಣ ಇಲಾಖೆಯ ಬಾಲಕರ ಹಾಸ್ಟೆಲ್ ನಲ್ಲಿ ರಾತ್ರಿಯ ಊಟ ಸೇವಿಸಿದ ಅವರಿಗೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ ಎಲ್.ಎನ್., ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಶ್ರೀನಿವಾಸಮೂರ್ತಿ, ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಕುಮಾರ್ ಬಚ್ಚೇಗೌಡ, ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ನವೀನ್‌ರಾಜ್‌ಸಿಂಗ್, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಅಪರ ಜಿಲ್ಲಾಧಿಕಾರಿ ಜಗದೀಶ್.ಕೆ.ನಾಯಕ, ಉಪ ವಿಭಾಗಾಧಿಕಾರಿ ಅರುಳ್ ಕುಮಾರ್, ಡಿವೈಎಸ್ಪಿ ಟಿ.ರಂಗಪ್ಪ ಅವರು ಜೊತೆಯಾದರು.
ಇಂದು ಮುಂಜಾನೆ ಸಚಿವರು, ಗುಂಡಮಗೆರೆ ಕೆರೆ ಏರಿ ಮೇಲೆ, ದೊಡ್ಡಬಳ್ಳಾಪುರ ಶಾಸಕ ಟಿ.ವೆಂಕಟರಮಣಯ್ಯ ಅವರೊಂದಿಗೆ, ಬೆಳಗಿನ ವಾಯುವಿಹಾರ ನಡೆಸಿ ಕೆರೆಯ ಸೌಂದರ್ಯವನ್ನು ಕಣ್ತುಂಬಿಕೊಂಡರು.
ಈ ವೇಳೆ ದೊಡ್ಡಬಳ್ಳಾಪುರ ಡಿವೈಎಪ್ಪಿ ರಂಗಪ್ಪ ಹಾಗೂ ಇತರೆ ಅಧಿಕಾರಿಗಳು ಇದ್ದರು. ಇಂದು ದಲಿತರ ಮನೆಯಲ್ಲಿ ಉಪಹಾರ ಸೇವಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮೂಲಗಳು ಹರಿತಲೇಖನಿಗೆ ತಿಳಿಸಿವೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.