ಬೆಂ.ಗ್ರಾ.ಜಿಲ್ಲೆ,: ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ನವದೆಹಲಿ ಅವರು 2021-22ನೇ ಸಾಲಿನಲ್ಲಿ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಂದ/ಸಂಸ್ಥೆಗಳಿಂದ “ವಯೋಶ್ರೇಷ್ಠ ಸಮ್ಮಾನ್ 2021” ರಾಷ್ಟ್ರ ಪ್ರಶಸ್ತಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅರ್ಹ ಹಿರಿಯ ನಾಗರಿಕರು ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಅರ್ಜಿಯನ್ನು ಪಡೆದು, ಆಂಗ್ಲ ಭಾಷೆಯಲ್ಲಿ ಭರ್ತಿ ಮಾಡಿ ದ್ವಿಪ್ರತಿಯಲ್ಲಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು 2021ರ ಮಾರ್ಚ್ 05 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ Website-:http//socialjustice.nic.in ಪರಿಶೀಲಿಸಬಹುದು ಅಥವಾ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ನೆಲಮಹಡಿ, ಕೊಠಡಿ ಸಂಖ್ಯೆ: 03, ಜಿಲ್ಲಾಡಳಿತ ಭವನ, ಬೀರಸಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ದೂರವಾಣಿ ಸಂಖ್ಯೆ: 080-29787441 ಅನ್ನು ಸಂಪರ್ಕಿಸಬಹುದಾಗಿದೆ ಎಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ, ಕೂ,ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….