ಹೊಸಹಳ್ಳಿಯಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ, ಹಳ್ಳಿಗಳ ಕಡೆ ಕಾರ್ಯಕ್ರಮ ಯಶಸ್ವಿ: ಸಚಿವ ಆರ್.ಅಶೋಕ್

ಬೆಂ.ಗ್ರಾ.ಜಿಲ್ಲೆ: ಕೇಂದ್ರ ಹಾಗೂ ರಾಜ್ಯ ಸರ್ಕಾರ ಜನಪರವಾಗಿದ್ದು, ಬಡವರ ಮನೆ ಬಾಗಿಲಿಗೆ ಆಡಳಿತ ಯಂತ್ರವನ್ನು ತರುವ ಮೂಲಕ ಅವರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ ಎಂದು ಕಂದಾಯ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ತಿಳಿಸಿದರು.

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಎಂಬ ರಾಜ್ಯ ಮಟ್ಟದ ವಿನೂತನ ಕಾರ್ಯಕ್ರಮದ ಎರಡನೇ ದಿನವಾದ ಇಂದು ದಲಿತ ಕಾಲೋನಿಯ ಬೀದಿಗಳಲ್ಲಿ ಸಂಚರಿಸಿ, ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ‌ ಅವರು ಮಾತನಾಡಿದರು.ಪಿಂಚಣಿ ಸಮಸ್ಯೆ ಸ್ಥಳದಲ್ಲೇ ಬಗೆಹರಿಸಲಾಗಿದ್ದು, ಆಶ್ರಯ ಮನೆ ಯೋಜನೆಯಡಿ ಅರ್ಹರಿಗೆ ಜಾಗ ನೀಡಲು ಸೂಚಿಸಲಾಗಿದೆ ಎಂದರು.

ಹೊಸಹಳ್ಳಿಯಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ, ಹಳ್ಳಿಗಳ ಕಡೆ ಎಂಬ ವಿನೂತನ ಕಾರ್ಯಕ್ರಮ ಯಶಸ್ವಿಯಾಗಿದ್ದು, ಜಿಲ್ಲಾಧಿಕಾರಿ, ಅಪರ ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ, ತಹಶೀಲ್ದಾರ್, ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ಪರಿಶ್ರಮದಿಂದಾಗಿ ಪಿಂಚಣಿ, ಪೋಡಿ, ಆಧಾರ್ ಕಾರ್ಡ್, ಪಡಿತರ ಚೀಟಿ, ಸ್ಮಶಾನದ ಒತ್ತುವರಿ ತೆರವು, ಅಂಗವಿಕಲರಿಗೆ ವಿವಿಧ ಸೌಲಭ್ಯಗಳನ್ನು ಸ್ಥಳದಲ್ಲಿಯೇ ನೀಡಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮ ಆರಂಭವಾದಗಿನಿಂದ ಅಂತ್ಯದವರೆಗೂ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ ಅವರು ಜೊತೆಯಲ್ಲಿ ಇದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕಾರ ನೀಡಿದ್ದು, ಸ್ಥಳೀಯ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ಮಾಡಿದ್ದಾರೆ ಎಂದರಲ್ಲದೆ, ಮುಂದಿನ ದಿನಗಳಲ್ಲಿ ಯಾರೊಬ್ಬರೂ ಅರ್ಜಿ ಹಿಡಿದು ತಾಲ್ಲೂಕು ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಅಲೆಯಬಾರದು. ಬದಲಿಗೆ, ಅಧಿಕಾರಿಗಳೇ ಜನರ ಮನೆ ಬಾಗಿಲಿಗೆ ಸೌಲಭ್ಯಗಳನ್ನು ತಲುಪಿಸುವ ಕೆಲಸ ಮಾಡಬೇಕು ಎಂದರು.

ಹೊಸಹಳ್ಳಿ ಗ್ರಾಮಕ್ಕೆ ಸಚಿವರು ಬಂದಿಳಿದಂದಿನಿಂದ ಇಲ್ಲಿಯವರೆಗೂ ಗ್ರಾಮಸ್ಥರು ಮನೆ ಮಗನಂತೆ ನೋಡಿಕೊಂಡಿದ್ದಾರೆ ಎಂದರು. ದಲಿತ ಕೇರಿಯ ವೆಂಕಟಲಕ್ಷ್ಮಮ್ಮ ಅವರ ಮನೆಯಲ್ಲಿ ರಾಗಿ ರೊಟ್ಟಿ, ಹುಚ್ಚೆಳ್ಳು ಚಟ್ನಿ, ಉಪ್ಪಿಟ್ಟು ಉಪಹಾರ ಸೇವಿಸಿದ್ದು ತುಂಬಾ ರುಚಿಕರವಾಗಿತ್ತು ಎಂದರಲ್ಲದೆ, ಯಾವುದೇ ಹೈಟೆಕ್ ಹೋಟೆಲ್ ನಲ್ಲಿಯೂ ಇಂತಹ ರುಚಿಕರವಾದ ಉಪಹಾರ ಸಿಗದು, ಅನ್ನದಾತ ಸುಖೀಭವ ಎಂದು ಅವರಿಗೆ ಧನ್ಯವಾದ ತಿಳಿಸಿದರು.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಟಿ. ವೆಂಕಟರಮಣಯ್ಯ, ಬೆಂಗಳೂರು ಪ್ರಾದೇಶಿಕ ಆಯುಕ್ತ ನವೀನ್ ರಾಜ್ ಸಿಂಗ್, ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್, ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್.ಕೆ.ನಾಯಕ, ಉಪ ವಿಭಾಗಾಧಿಕಾರಿ ಅರುಳ್ ಕುಮಾರ್, ಡಿವೈಎಸ್ಪಿ ರಂಗಪ್ಪ, ತಹಸೀಲ್ದಾರ್ ಟಿ.ಎಸ್.ಶಿವರಾಜ್, ಇಒ ಮುರುಡಯ್ಯ, ಪಿಡಿಒ ನಾಗರಾಜ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕ ಎನ್.ಎಸ್.ಮಹೇಶ್, ದೊಡ್ಡಬಳ್ಳಾಪುರ ಸರ್ಕಲ್‌ ಇನ್ಸ್‌ಪೆಕ್ಟರ್ ನವೀನ್ ಕುಮಾರ್, ತಾಪಂ ಮಾಜಿ ಅಧ್ಯಕ್ಷ ಹೆಚ್.ಎಸ್.ಅಶ್ವಥ್ ನಾರಾಯಣ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸಚಿವರು ಬೆಳಗಿನ ಜಾವ ಗುಂಡುಮ ಕೆರೆ ಏರಿ ವಾಯು ವಿಹಾರ ಮುಗಿಸಿ ಬಂದು, ಹೊಸಹಳ್ಳಿ ಕಾಲೋನಿಯ ವೆಂಕಟಲಕ್ಷ್ಮಮ್ಮ ಎಂಬುವವರ ಮನೆಯಲ್ಲಿ ರಾಗಿ ರೊಟ್ಟಿ, ಹುಚ್ಚೆಳ್ಳು ಚಟ್ನಿ, ಉಪ್ಪಿಟ್ಟು ಸೇವಿಸಿದರು.

ನಂತರ ಅವರ ಮನೆಯ ಆವರಣದಲ್ಲಿ ಹೊಸಹಳ್ಳಿ ಗ್ರಾಮಸ್ಥರೊಂದಿಗೆ ಸಭೆ ನಡೆಸಿ, ಅಹವಾಲುಗಳನ್ನು ಸ್ವೀಕರಿಸಿದರು. ತದನಂತರ ಗ್ರಾಮದ ಬೀದಿಗಳಲ್ಲಿ ಸಂಚರಿಸಿ, ಗ್ರಾಮ ವೀಕ್ಷಣೆ ಮಾಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ, ಕೂ,ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!