ಅಮೇರಿಕಾದ ಟ್ವಿಟರ್ ಗೆ ಟಕ್ಕರ್ ಕೊಡುತ್ತಿರುವ ಬೆಂಗಳೂರಿನ ಕೂ….

ಬೆಂಗಳೂರು: ದೆಹಲಿ ರೈತ ಪ್ರತಿಭಟನೆ ವೇಳೆ ಮಾಡಲಾದ ಪ್ರಚೋದನಾಕಾರಿ ಟ್ವೀಟ್‌ ಅಳಿಸಿಹಾಕುವಂತೆ ಸೂಚಿಸಿದ ತನ್ನ ಆದೇಶ ಪಾಲಿಸದ ಅಮೆರಿಕ ಮೂಲದ ಟ್ವೀಟರ್ಗೆ‌ ಬೆಂಗಳೂರು ಮೂಲದ ‘ಕೂ’ ಮೂಲಕ ಕೇಂದ್ರ ಸರ್ಕಾರ ಸೆಡ್ಡು ಒಡೆದಿದೆ.

ಇದರ ಅಂಗವಾಗಿ ಸರ್ಕಾರದ ನಿರ್ಧಾರ, ಆದೇಶ ಅಥವಾ ಇನ್ಯಾವುದೇ ವಿಷಯಗಳನ್ನು ಟ್ವೀಟರ್‌ಗಿಂತ ಮೊದಲು ‘ಕೂ’ ಆ್ಯಪ್‌ನಲ್ಲಿ ಹಂಚಿಕೊಳ್ಳುತ್ತಿದೆ ಅಂದರೆ ಟ್ವೀಟರ್‌ಗಿಂತ ಕನಿಷ್ಠ 3 ಗಂಟೆ ಮೊದಲು ಇಂಥ ಮಾಹಿತಿಯನ್ನು ‘ಕೂ’ನಲ್ಲಿ ಪ್ರಕಟಿಸಲಾಗುತ್ತಿದೆ. ಸಹಜವಾಗಿಯೇ ಹೆಚ್ಚಿನ ಜನರು ಟ್ವೀಟರ್‌ಗಿಂತ ಹೆಚ್ಚಾಗಿ ‘ಕೂ’ ಅನ್ನು ಫಾಲೋ ಮಾಡಲಿದ್ದಾರೆ. ಇದು ಕೇಂದ್ರದ ಕಾರ್ಯತಂತ್ರ ಎಂದು ಕೇಂದ್ರ ಸರ್ಕಾರದ ಉನ್ನತ ಮೂಲಗಳ ಮಾಹಿತಿಯನ್ನು ರಾಷ್ಟ್ರೀಯ ಮಾಧ್ಯಮ ವರದಿ ಮಾಡಿದೆ.

ಇದಕ್ಕೆ ಪೂರಕವಾಗಿ ಈಗಾಗಲೇ ಕೇಂದ್ರದ ಬಹುತೇಕ ಸಚಿವಾಲಯ, ಇಲಾಖೆ, ಸಚಿವರು ‘ಕೂ’ನಲ್ಲಿ ತಮ್ಮ ಖಾತೆ ತೆರೆದಿದ್ದಾರೆ. ಜೊತೆಗೆ ಹಲವು ರಾಜ್ಯಗಳಲ್ಲಿಯೂ ಬಿಜೆಪಿ ನಾಯಕರು ಇದೇ ಹಾದಿ ತುಳಿದಿದ್ದಾರೆ.

ಕೇಂದ್ರ ಸರ್ಕಾರ ಮತ್ತು ಅಮೆರಿಕ ಮೂಲದ ಟ್ವೀಟರ್‌ ನಡುವೆ ಮುಸುಕಿನ ಯುದ್ಧ ಆರಂಭವಾದ ಬೆನ್ನಲ್ಲೇ, ಟ್ವೀಟರ್‌ಗೆ ಪರ್ಯಾಯ ಎನಿಸಿಕೊಂಡಿರುವ ಬೆಂಗಳೂರು ಮೂಲದ ‘ಕೂ’ ಆ್ಯಪಿಗೆ ಸೇರಿದವ ಸಂಖ್ಯೆ 45 ಲಕ್ಷಕ್ಕೆ ಏರಿಕೆಯಾಗಿದೆ ಎನ್ನಲಾಗುತ್ತಿದೆ.

ಬೆಂಗಳೂರು ಮೂಲದ ಕೂ ಟ್ವೀಟರ್‌ ರೀತಿಯಲ್ಲೇ ಸೇವೆ ನೀಡುವ ಚುಟುಕು ಸಾಮಾಜಿಕ ಜಾಲತಾಣ. ಇದರಲ್ಲಿ 400 ಪದಗಳವರೆಗೆ ಬರೆಯಬಹುದು. ಜೊತೆಗೆ ಲಿಪ್ಯಂತರ ಸೇವೆ ಲಭ್ಯವಿದೆ. ಟ್ವೀಟರ್‌ಗೆ ಪರ್ಯಾಯವಾಗಿ ಇದನ್ನು ಬೆಂಗಳೂರಿನ ಇಬ್ಬರು ಸ್ಥಾಪಿಸಿದ್ದಾರೆ.

ಕನ್ನಡ, ತೆಲುಗು, ತಮಿಳು ಮತ್ತು ಇಂಗ್ಲಿಷ್ ಭಾಷೆಯಲ್ಲಿ ಬಳೆಕೆದಾರರು ಕೂ ಬಳಸಬಹುದಾಗಿದ್ದು, ಶೀಘ್ರವೇ ಇನ್ನಿತರ ಭಾರತೀಯ ಭಾಷೆಗಳಲ್ಲೂ ಕೂ ತನ್ನ ಸೇವೆ ನೀಡಲಿದೆ ಎಂದು ಸಂಸ್ಥೆ ತಿಳಿಸಿದೆ.

ಸ್ಥಳೀಯ ಭಾಷೆಗಳಲ್ಲಿ ತಮ್ಮ ಅನಿಸಿಕೆ, ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಇದು ಅವಕಾಶವನ್ನು ಕಲ್ಪಿಸುತ್ತದೆ. ಬಳಕೆದಾರರು 400 ಅಕ್ಷರಗಳಲ್ಲಿ ತಮ್ಮ ಸಂದೇಶಗಳನ್ನು ಬರೆಯಬಹುದು.

ಹೌದು ನೀವ್ ಕೂ ಅಲ್ಲಿದ್ದೀರಾ…ಇದ್ದರೆ ಹರಿತಲೇಖನಿ ಫಾಲೋ ಮಾಡೋದ್ ಮರಿಬೇಡಿ..

ರಾಜಕೀಯ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಜೆಡಿಎಸ್‌ನ (JDS) ಹಿರಿಯ ಮುಖಂಡ ಹುಸ್ಕೂರು ಆನಂದ್ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದು, ಭಿನಮತ ಶಮನವಾಗಿರುವ ಮಾಹಿತಿ ತಿಳಿದು ಬಂದಿದೆ.

[ccc_my_favorite_select_button post_id="121822"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]