
ದೊಡ್ಡಬಳ್ಳಾಪುರ: ನಗರದ ಮಹಿಳಾ ಸಮಾಜ ಕಸ್ತೂರಿ ಬಾ ಶಿಶು ವಿಹಾರದ ವತಿಯಿಂದ ಮಕ್ಕಳಿರಲವ್ವ ಮನೆ ತುಂಬಾ ಆರೋಗ್ಯ ಕಾರ್ಯಕ್ರಮ ಫೆ.23 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.
ಕಾರ್ಯಕ್ರಮದಲ್ಲಿ ಸ್ತೀ ರೋಗ ತಜ್ಞೆ ಡಾ.ಬಿ.ಆರ್.ಉಷಾ ಮಾತನಾಡಲಿದ್ದಾರೆ. ಮುಖ್ಯಅತಿಥಿಗಳಾಗಿ ಅಂತರ ರಾಷ್ಟ್ರೀಯ ಯೋಗಾಪಟು ಬಿ.ಜಿ.ವಿಜಯರಘುನಾಥ್, ನಗರದ ಸರ್ಕಾರಿ ಆಸ್ಪತ್ರೆ ಡಾ.ವಸುಧಾ ಭಾಗವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಮಹಿಳಾ ಸಮಾಜದ ಅಧ್ಯಕ್ಷೆ ಕೆ.ಎಸ್.ಪ್ರಭಾ ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಗಣರಾಜ್ಯೋತ್ಸವ ದಿನದಂದು ನಡೆದ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಹಾಗೂ ಉಚಿತ ಆರೋಗ್ಯ ತಪಾಸಣ ಶಿಬಿರ ನಡೆಯಲಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ, ಕೂ,ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

