
ದೊಡ್ಡಬಳ್ಳಾಪುರ: ಗ್ರಾಮಪಂಚಾಯಿತಿಗಳ ವ್ಯಾಪ್ತಿಯಲ್ಲಿ ಇ-ಖಾತೆಗಳಿಗೆ ಒತ್ತು ನೀಡುವ ಮೂಲಕ ಗ್ರಾಪಂಗಳ ಅಭಿವೃದ್ಧಿಗೆ ಗಮನ ಹರಿಸಬೇಕೆಂದು ತಾಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣಗೌಡ ಅಧಿಕಾರಿಗಳಿಗೆ ಸಲಹೆ ನೀಡಿದರು.
ತಾಲೂಕಿನ ರಾಜಘಟ್ಟ ಗ್ರಾಮಪಂಚಾಯಿತಿಗೆ ಭೇಟಿ ನೀಡಿದ ಅವರು, ವಿವಿಧ ಯೋಜನೆಗಳ ಪ್ರಗತಿ ಪರಿಶೀಲಿಸಿ ಅಧಿಕಾರಿಗಳೊಂದಿಗೆ ಮಾತು ಕತೆ ನಡೆಸಿದರು.
ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಖಾತೆ ಕುರಿತು ಗೊಂದಲದಿಂದಾಗಿ ಸಾರ್ವಜನಿಕರು ಬಸವಳಿಯುತ್ತಿದ್ದಾರೆ. ಯಾವುದೇ ಗೊಂದಲವಿಲ್ಲದ ಇ-ಖಾತೆ ಮೂಲಕ ಸಾರ್ವಜನಿಕರಿಗೆ ನೆರವಾಗುವ ಜೊತೆ ಗ್ರಾಮಪಂಚಾಯಿತಿಗಳ ಅಭಿವೃದ್ಧಿಗೆ ಶ್ರಮಿಸಬೇಕೆಂದರು.
ನೂತನವಾಗಿ ಆಯ್ಕೆಯಾಗಿರುವ ಸದಸ್ಯರು ಉತ್ಸಾಹದಲ್ಲಿರುವುದರಿಂದ ಆಡಳಿತ ಯಂತ್ರ ಚುರುಕಾಗಿ ಕಾರ್ಯನಿರ್ವಹಿಸಲು ಸಿದ್ದರಾಗಬೇಕಿದೆ. ಯಾವುದೇ ಗೊಂದಲಗಳಿದ್ದರೆ ತಾಪಂಗೆ ಭೇಟಿ ನೀಡಿ ಸಲಹೆ, ಸೂಚನೆ ಪಡೆಯಲು ಅಧಿಕಾರಿಗಳಿಗೆ ಸಲಹೆ ನೀಡಿದರು.
ಈ ವೇಳೆ ಗ್ರಾಪಂ ಪಿಡಿಒ ಸೋಮಮೂರ್ತ ಸೇರಿದಂತೆ ಸಿಬ್ಬಂದಿಗಳು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

