
ದೊಡ್ಡಬಳ್ಳಾಪುರ: ಧೂಮಪಾನ ಹಾಗೂ ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಜನಜಾಗೃತಿ ಮೂಡಿಸುವ ಸಲುವಾಗಿ, ನಗರದ ಅರಳು ಮಲ್ಲಿಗೆ ಬಾಗಿಲಿನ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಗುಲಾಬಿ ಆಂದೋಲನಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಬೈಯಪ್ಪರೆಡ್ಡಿ ಚಾಲನೆ ನೀಡಿದರು.
ಜಿಲ್ಲಾಡಳಿತ ಮತ್ತು ಜಿಲ್ಲಾಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಘಟಕದಿಂದ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು.
ಕಾರ್ಯಕ್ರಮದ ಅಂಗವಾಗಿ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಅಂಗಡಿಗಳಿಗೆ ತೆರಳಿ ಮಾಲೀಕರಿಗೆ ಗುಲಾಬಿ ಹೂ ನೀಡುವ ಮೂಲಕ ಬೀಡಿ, ಸಿಗರೇಟ್ ಇತರ ತಂಬಾಕು ಉತ್ಪನಗಳ ಮಾರಾಟ ಮಾಡುವ ವೇಳೆ ಅಪ್ರಾಪ್ತರಿಗೆ ನೀಡದೆ ಇರುವುದು, ಹಿರಿಯರಿಗೆ ತಂಬಾಕು ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವಂತೆ ಮನವಿ ಮಾಡಿದರು.
ಈ ವೇಳೆ ನಗರ ಆಸ್ಪತ್ರೆಯ ಡಾ.ವಸುಧಾ, ಆಪ್ತ ಸಮಾಲೋಚಕಿ ಪದ್ಮ, ಹಿರಿಯ ಆರೋಗ್ಯ ಸಹಾಯಕ ಟಿ.ಕೆ.ಕರಿಯಪ್ಪ, ಹಿರಿಯ ಮಹಿಳಾ ಆಪ್ತ ಸಹಾಯಕಿಯರಾದ ಕೆ.ಎನ್.ವೀಣಾ, ಮಂಜುಳ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

