
ದೊಡ್ಡಬಳ್ಳಾಪುರ: ಇತ್ತೀಚಿಗೆ ಶಿವಮೊಗ್ಗದ ಹುಣಸೋಡು ಹಾಗೂ ಚಿಕ್ಕಬಳ್ಳಾಪುರದ ಹಿರೇನಾವಲ್ಲಿ ಗ್ರಾಮದಲ್ಲಿನ ಕಲ್ಲು ಕ್ಯಾರಿಯಲ್ಲಿ ಸಂಭವಿಸಿರುವ ದುರಂತದ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಲ್ಲಿನ ಕ್ವಾರಿಗಳ ಬಗ್ಗೆ ನಿಗಾವಹಿಸಲಾಗಿದೆ ಎಂದು ತಹಶಿಲ್ದಾರ್ ಟಿ.ಎಸ್.ಶಿವರಾಜ್ ಹರಿತಲೇಖನಿಗೆ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ತಾಲೂಕಿನ ಹಳೆಕೋಟೆ ಹಾಗೂ ಪಾಲ್ ಪಾಲ್ ದಿನ್ನೆಯಲ್ಲಿ ಕಲ್ಲಿನ ಕ್ವಾರಿಗಳು ಕಾರ್ಯನಿರ್ವಹಿಸುತ್ತಿದ್ದು, ಅಗತ್ಯ ಮುಂಜಾಗ್ರತೆಯ ಕೈಗೊಳ್ಳುವಂತೆ ಕ್ಯಾರಿಗಳ ಮಾಲೀಕರಿಗೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ ಎಂದರು.
ಈಗಾಗಲೇ ಎರಡು ಕ್ವಾರಿಗಳಿಗೆ ಭೇಟಿ ನೀಡಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಪರಿಶೀಲನೆ ನಡೆಸಲಾಗಿದೆ. ಅಲ್ಲದೆ ಗುರುವಾರ ಮತ್ತೆ ಉಪವಿಭಾಗಾಧಿಕಾರಿ ಅರುಳ್ ಕುಮಾರ್ ಅವರೊಂದಿಗೆ ಕ್ವಾರಿಗಳಿಗೆ ತೆರಳಿ ಪರಿಶೀಲನೆ ಮಾಡಲಾಗುತ್ತಿದೆ. ಆ ಮೂಲಕ ತಾಲೂಕಿನಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ನಿಗಾವಹಿಸಲಾಗಿದೆ ಎಂದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

