
ದೆಹಲಿ: ದೆಹಲಿಯಲ್ಲಿ ಅಡುಗೆ ಅನಿಲದ ಬೆಲೆ ಮತ್ತೆ 25 ರೂಪಾಯಿ ಹೆಚ್ಚಳವಾಗಿದ್ದು, ಸಿಲಿಂಡರ್ನ ಬೆಲೆ 794 ರೂಪಾಯಿಗೆ ಬಂದು ನಿಂತಿದೆ.
ಕಳೆದ ಒಂದು ತಿಂಗಳ ಅಂತರದಲ್ಲಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಸತತ ನಾಲ್ಕನೆ ಬಾರಿಕೆ ಏರಿಕೆ ಕಂಡಿದೆ. ಈ ಮೂಲಕ ಡಿಸೆಂಬರ್ ರಿಂದ ಇಲ್ಲಿಯ ವರೆಗೆ ಎಲ್ಪಿಸಿ ಸಿಲಿಂಡರ್ ಬೆಲೆಯಲ್ಲಿ 200 ರೂ ಏರಿಕೆಯಾಗಿದೆ.
ಪೆಟ್ರೋಲ್ / ಡಿಸೇಲ್ ಬೆಲೆಯಲ್ಲಿ ಸತತ ಏರಿಕೆಯಾಗುತ್ತಿರುವ ಬೆನ್ನಲ್ಲೆ ಜಿದ್ದಿಗೆ ಬಿದ್ದಂತೆ, ಸಿಲಿಂಡರ್ ಬೆಲೆಯಲ್ಲೂ ಏರಿಕೆಯಾಗಿರುವುದು ಕೇಂದ್ರ ಸರ್ಕಾರದ ವಿರುದ್ದ ಜನ ಸಾಮಾನ್ಯರ ಆಕ್ರೋಶಕ್ಕೆ ಕಾರಣವಾಗುತ್ತಿದೆ. (ಸುದ್ದಿ ಮೂಲ ರಾಷ್ಟ್ರೀಯ ಮಾಧ್ಯಮ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

