
ಬೆಂ.ಗ್ರಾ.ಜಿಲ್ಲೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಸ್ಪೂರ್ತಿ ಮಹಿಳಾ ಮತ್ತು ಮಕ್ಕಳ ಸಾಮಾಜಿಕ ಸಾಂಸ್ಕೃತಿಕ ಸಂಸ್ಥೆ(ರಿ) ನಂದಗುಡಿಯ ಸಹಯೋಗದೊಂದಿಗೆ 2020-21ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ “ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ನೃತ್ಯ ಹಾಗೂ ಇತರೆ ಕಲಾ ಪ್ರಕಾರಗಳ ಕಲಾವಿದರಿಗೆ ಪ್ರೋತ್ಸಾಹ ನೀಡುವ ಕಾರ್ಯಕ್ರಮ” ವನ್ನು 2021ರ ಫೆಬ್ರವರಿ 25 ರಂದು ಬೆಳಿಗ್ಗೆ 11.00 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ನಂದಗುಡಿಯ ಸಂಘಮಿತ್ರ ಪ್ರೌಢಶಾಲೆಯಲ್ಲಿ ಏರ್ಪಡಿಸಲಾಗಿದೆ.ಕಾರ್ಯಕ್ರಮವನ್ನು ನಂದಗುಡಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಕಮಲಮ್ಮ ಶಿವಕುಮಾರ್ ಅವರು ಉದ್ಘಾಟಿಸಲಿದ್ದು, ನಂದಗುಡಿಯ ಸಂಘಮಿತ್ರ ಸರ್ವಿಸ್ ಸೊಸೈಟಿ (ರಿ) ಅಧ್ಯಕ್ಷರಾದ ಸಿ.ಭೈರಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳು ನಂದಗುಡಿಯ ಸ್ಪೂರ್ತಿ ಮಹಿಳಾ ಮತ್ತು ಮಕ್ಕಳ ಸಾಮಾಜಿಕ ಸಾಂಸ್ಕೃತಿಕ ಸಂಸ್ಥೆ(ರಿ)ಯ ಅಧ್ಯಕ್ಷರಾದ ಎನ್.ಶಿವಮ್ಮ ಅವರು ಭಾಗವಹಿಸಲಿದ್ದಾರೆ.
ಶಾಸ್ತ್ರೀಯ ಸಂಗೀತ, ಶಾಸ್ತ್ರೀಯ ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ
ಸಹಾಯಕ ನಿರ್ದೇಶಕರಾದ ಬಿ.ಮಂಜುನಾಥ್ ಆರಾಧ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

