
ಬೆಂಗಳೂರು: ಹೊಸಕೋಟೆ ವಿಧಾನಸಭೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷಕ್ಕೆ ಬಾಹ್ಯ ಬೆಂಬಲ ಘೋಷಿಸಿದರು ಹಾಗೂ ಸಹ ಸದಸ್ಯತ್ವದ ಪತ್ರ ಸ್ವೀಕರಿಸಿದರು.
ಬೆಂಗಳೂರಿನಲ್ಲಿ ಗುರುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷಕ್ಕೆ ಬಾಹ್ಯ ಬೆಂಬಲ ಪ್ರಕಟಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮಾಜಿ ಸಚಿವ ಜಮೀರ್ ಅಹ್ಮದ್, ಶಾಸಕರಾದ ಭೈರತಿ ಸುರೇಶ್ ಮತ್ತಿತರರು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

