
ದೊಡ್ಡಬಳ್ಳಾಪುರ: ಇಂದು ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆದ ಉಚಿತ ಸಾಮೂಹಿಕ ವಿವಾಹಕ್ಕೆ ಅರ್ಜಿ ಸಲ್ಲಿಸಿದ್ದರೂ ಸಹ ನಮ್ಮನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದು ವ್ಯಕ್ತಿಯೋರ್ವ ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆಯಿತು.
ಇಂದು ಘಾಟಿ ಕ್ಷೇತ್ರದಲ್ಲಿ ಹಲವು ಸಂಭ್ರಮಕ್ಕೆ ಕಾರಣವಾದ ಸಪ್ತಪದಿ ಕಾರ್ಯಕ್ರಮದಲ್ಲಿ ಮದುವೆಯಾಗಲು ಅವಕಾಶ ಮಾಡಿಕೊಡಿ ಎಂದು ಮುನಿರಾಜು ಮತ್ತು ಸುಕನ್ಯ ವಧುವರರ ಪರವಾಗಿ ವಧುವಿನ ಸೋದರಮಾವ ಮುನಿರಾಜು ಅವರು ಒತ್ತಾಯಿಸಿದ್ದರಿಂದ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
ದಾಖಲಾತಿಗಳನ್ನು ನೀಡಿದ್ದರೂ ನಮ್ಮನ್ನು ಅಂತಿಮ ಪಟ್ಟಿಯಿಂದ ಕೈಬಿಡಲಾಗಿದೆ. ಸಾಮೂಹಿಕ ವಿವಾಹದಲ್ಲಿ ನಮಗೆ ಮದುವೆ ಮಾಡಿಸಬೇಕೆಂದು ಪಟ್ಟು ಹಿಡಿದರು. ಸಾಮೂಹಿಕ ವಿವಾಹಕ್ಕೆ ನೀಡಬೇಕಿದ್ದ ಸೂಕ್ತ ದಾಖಲಾತಿಗಳನ್ನು ನೀಡದಿದ್ದರಿಂದ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಅಧಿಕಾರಿಗಳು ಸಮಜಾಯಿಷಿ ನೀಡಿದರೂ ತೃಪ್ತರಾಗದ ಅವರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ವಿವಾಹಕ್ಕೆ ಅವಕಾಶ ನೀಡುವಂತೆ ಒತ್ತಾಯಿಸಿದರು.
ಈ ವೇಳೆ ಸೂಕ್ತ ದಾಖಲಾತಿಗಳನ್ನು ಪರಿಶೀಲಿಸಿ ವಿವಾಹ ನಡೆಸುವಂತೆ ಸಚಿವರು ಸೂಚಿಸಿದ ನಂತರ ಅರ್ಚಕರು ವಧುವರರಿಗೆ ತಾಳಿಯನ್ನು ನೀಡಿ, ಮದುವೆ ಕಾರ್ಯ ನಡೆಸಲಾಯಿತು.
ಅದರೆ ಈ ಕುರಿತಂತೆ ಘಾಟಿ ಸುಬ್ರಹ್ಮಣ್ಯ ದೇವಾಲಯದ ಕಾರ್ಯನಿರ್ವಹಣಾಧಿಕಾರಿ ನಡೆ ಸಾರ್ವಜನಿಕರಲ್ಲಿ ಚರ್ಚೆಗೆ ಕಾರಣವಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

