
ದೊಡ್ಡಬಳ್ಳಾಪುರ: ತೆಲಂಗಾಣ ರಾಜ್ಯದಲ್ಲಿ ವಕೀಲ ದಂಪತಿಗಳ ಮೇಲೆ ನಡೆದ ಬರ್ಭರ ಹತ್ಯೆಯನ್ನು ಖಂಡಿಸಿ ಹಾಗೂ ವಕೀಲರ ಹಿತರಕ್ಷಣಾ ದೃಷ್ಟಿಯಿಂದ ವಕೀಲರ ಹಿತರಕ್ಷಣಾ ಕಾಯ್ದೆಯನ್ನು ಜಾರಿಗೆ ತರಬೇಕೆಂದು ಆಗ್ರಹಿಸಿ, ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘದ ವತಿಯಿಂದ ನ್ಯಾಯಾಲಯದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ವಕೀಲರು, ಇದೇ ಫೆಬ್ರವರಿ 17ರಂದು ತೆಲಂಗಾಣ ರಾಜ್ಯದಲ್ಲಿ ವಕೀಲ ದಂಪತಿಗಳಾದ ಗಟ್ಟು ವಾಮನ್ ರಾವ್ ಹಾಗೂ ನಾಗಮಣಿ ಅವರ ಅವರನ್ನು ಬರ್ಭರವಾಗಿ ಹತ್ಯೆ ಮಾಡಲಾಗಿದೆ.
ವಕೀಲರ ಮೇಲೆ ಹಲ್ಲೆ, ಹತ್ಯೆಗಳ ಘಟನೆಗಳು ನಡೆಯುತ್ತಿರುವುದು ಖಂಡನೀಯವಾಗಿದೆ. ಕೂಡಲೇ ಸಂಬಂಧಪಟ್ಟವರು ಹತ್ಯೆ ಮಾಡಿದ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಇನ್ನು ಮುಂದೆ ವಕೀಲರ ಮೇಲೆ ಯಾವುದೇ ಕೃತ್ಯಗಳು ನಡೆಯದಂತೆ ವಕೀಲರಿಗೆ ಸೂಕ್ತ ರಕ್ಷಣೆಯನ್ನು ನೀಡುವ ನಿಟ್ಟಿನಲ್ಲಿ ವಕೀಲರ ರಕ್ಷಣಾ ಕಾಯ್ದೆ ಯನ್ನು ಶೀಘ್ರವೇ ಸರ್ಕಾರ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘದ ಪದಾಧಿಕಾರಿಗಳು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

