
ಬೆಂ.ಗ್ರಾ.ಜಿಲ್ಲೆ: ಸಾರ್ವಜನಿಕರಿಗೆ ಸರ್ಕಾರಿ ಸೌಲಭ್ಯ ನೀಡುವಂತಹ, ಪ್ರತಿಯೊಂದು ಇಲಾಖೆಗಳಲ್ಲಿ ಉಳಿದಿರುವ ಅನುದಾನವನ್ನು ಮಾರ್ಚ್ ಮೊದಲ ವಾರದೊಳಗೆ ಬಳಕೆ ಮಾಡಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಗರುವ ಸವಲತ್ತುಗಳನ್ನು ಸಾರ್ವಜನಿಕರಿಗೆ ತಲುಪಿಸುವ ಕೆಲಸವಾಗಬೇಕು ಎಂದರು.
ಕೃಷಿ ಇಲಾಖೆಗೆ ರೂ. 30ಳ ಪ್ರಗತಿ ಪರಿಶೀಲನ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಇಲಾಖೆಗಳಲ್ಲಿ ಉಳಿದಿರುವ ಅನುದಾನವನ್ನು ಸೂಕ್ತ ಸಮಯದಲ್ಲಿ ಬಳಕೆ ಮಾಡಬೇಕು ಹಾಗೂ ಲಭ್ಯವಿ0.76 ಲಕ್ಷ ಅನುದಾನ ಬಿಡುಗಡೆಯಾಗಿದ್ದು, ರೂ. 241.80 ಲಕ್ಷ ಬಳಕೆಯಾಗಿದೆ. ಅದೇರೀತಿ ತೋಟಗಾರಿಕೆ ಇಲಾಖೆಗೆ ರೂ 283.06 ಲಕ್ಷ ಬಿಡುಗಡೆಯಾಗಿರುವ ಮೊತ್ತದಲ್ಲಿ ರೂ. 159.41 ಲಕ್ಷ ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು.
ಹಾಸ್ಟೆಲ್ ನಿರ್ವಹಣೆಗಾಗಿ ಬಿಡುಗಡೆಯಾಗಿರುವ ಹಣ ಬಳಕೆಯಾಗಬೇಕು. ಪೌರ ಕಾರ್ಮಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಜೊತೆಯಲ್ಲಿ, ಅವರಿಗೆ ಅವಶ್ಯವಿರುವ ಸಮವಸ್ತ್ರಗಳನ್ನು ನೀಡಬೇಕು ಎಂದು ಹೇಳಿದರು.
ಹೊಸಕೋಟೆ ನಗರಸಭೆಯಲ್ಲಿ, ರೂ 75 ಲಕ್ಷ ಹಣ ಬಾಕಿ ಉಳಿದಿದ್ದು, ಮಾರ್ಚ್ ಮೊದಲ ವಾರದೊಳಗಡೆ ಹಣ ಬಳಕೆ ಮಾಡಬೇಕು. ಅದೇರೀತಿ ದೇವನಹಳ್ಳಿ ಪುರಸಭೆಯಲ್ಲಿ ರೂ. 18 ಲಕ್ಷ, ವಿಜಯಪುರ ಪುರಸಭೆಯಲ್ಲಿ ರೂ. 3 ಲಕ್ಷ ಹಣ ಬಳಕೆಯಾಗದೆ ಬಾಕಿ ಉಳಿದಿದ್ದು, ನೆಲಮಂಗಲ ನಗರ ಸಭೆಯಲ್ಲಿ ಜೂನ್ ಮತ್ತು ಜುಲೈ ತಿಂಗಳಿನಲ್ಲಿ ಆ್ಯಕ್ಷನ್ ಪ್ಲಾನ್ ಆಗಿದ್ದರೂ, ಇನ್ನೂ 40% ರಷ್ಟು ಹಣ ಬಾಕಿ ಉಳಿದಿದೆ. ಯಾವುದೇ ಅನುದಾನ ಬಳಕೆಯಾಗದೆ ಉಳಿಯಬಾರದು. ಈ ನಿಟ್ಟಿನಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್. ಕೆ.ನಾಯಕ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾ ಅಧಿಕಾರಿ ವಿನುತಾರಾಣಿ, ನಗರಾಭಿವೃದ್ಧಿ ಪ್ರಾಧಿಕಾರ ಕೋಶದ ಯೋಜನಾ ನಿರ್ದೇಶಕಿ ಸುಮಾ, ದೊಡ್ಡಬಳ್ಳಾಪುರ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸೋಮಶೇಖರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

