ಸಾಸಲು ಮತ್ತು ಕಸಬ ಹೋಬಳಿಗೆ ವಿದ್ಯಾರ್ಥಿ ನಿಲಯ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ: ಶಾಸಕ‌ ಟಿ.ವೆಂಕಟರಮಣಯ್ಯ

ದೊಡ್ಡಬಳ್ಳಾಪುರ: ತಾಲೂಕಿನ ಎಲ್ಲಾ ಹೋಬಳಿಗಳಲ್ಲಿ ಈ ಹಿಂದಿನ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಬಹು ಕೋಟಿಗಳ ಅನುದಾನದ ಮೂಲಕ ಸುಸಜ್ಜಿತವಾದ ವಿದ್ಯಾರ್ಥಿ ನಿಲಯಗಳು ನಿರ್ಮಾಣವಾಗಿವೆ. ಉಳಿದ ಸಾಸಲು ಮತ್ತು ಕಸಬ ಹೋಬಳಿಯಲ್ಲಿ  ಸುಸಜ್ಜಿತವಾದ ವಿದ್ಯಾರ್ಥಿ ನಿಯಲಯಗಳ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇನೆ ಎಂದು ಶಾಸಕ ಟಿ.ವೆಂಕಟರಮಣಯ್ಯ ತಿಳಿಸಿದರು.

ಅವರು ಇಲ್ಲಿನ ಮಾದಗೊಂಡನಹಳ್ಳಿ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಮತ್ತು ಪ್ರಥಮ ಸ್ನಾತಕೋತರ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಹಾಗು 2020-21ನೇ ಸಾಲಿನ ಸಾಂಸ್ಕೃತಿಕ, ಎನ್.ಸಿ.ಸಿ, ಎನ್‍ಎಸ್‍ಎಸ್, ರೆಡ್ ಕ್ರಾಸ್ ಸೇರಿದಂತೆ ವಿವಿಧ ಸಮಿತಿಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತುಮಕೂರು ರಸ್ತೆಯಿಂದ ಕಾಲೇಜಿನ ವರೆಗಿನ ಸುಮಾರು 2 ಕಿಮಿ ರಸ್ತೆಗೆ ಡಾಂಬಾರು ಹಾಕುವ ಕಾಮಗಾರಿ ಪ್ರಗತಿ ಹಂತದಲ್ಲಿದೆ. ಆದರೆ ರಸ್ತೆ ಭಾಗ ಒತ್ತುವರಿಯಾಗಿರುವುದರಿಂದ ವಿಳಂಬವಾಗಿದ್ದು, ಈ ಸಮಸ್ಯೆಗಳನ್ನು ಬಗೆ ಹರಿಸಿ ರಸ್ತೆಗೆ ಡಾಂಬಾರು ಹಾಕಲಾಗುವುದು ಎಂದು ಅವರು ಭರವಸೆ ನೀಡಿದರು.

ಕಳೆದ ಸರ್ಕಾರದ ಅವಧಿಯಲ್ಲಿ ತಾಲೂಕಿಗೆ ವಿಶೇಷ ಅನುದಾನಗಳನ್ನು ತಂದಿದ್ದು, ದೊಡ್ಡಬಳ್ಳಾಪುರದಲ್ಲಿ ಹೈಟೆಕ್ ವಿದ್ಯಾರ್ಥಿ ನಿಲಯಗಳು ನಿರ್ಮಾಣವಾಗಿವೆ. ಅಲ್ಲದೆ ಇವು ರಾಜ್ಯದಲ್ಲಿ ಮಾದರಿಯಾಗಿದ್ದು, ರಾಜ್ಯದ ವಿವಿಧೆಡೆ ಇದೆ ಮಾದರಿಯಲ್ಲಿ ವಿದ್ಯಾರ್ಥಿ ನಿಲಯ ನಿರ್ಮಾಣ ಮಾಡುತ್ತಿರುವುದು ಇಲ್ಲಿನ ಸೃಜನಾತ್ಮಕ ಅಭಿವೃದ್ಧಿಗೆ ಹಿಡಿದ ಕನ್ನಡಿಯಾಗಿದೆ. 

ವಿದ್ಯಾರ್ಥಿಗಳು ಬಡವರ ಶೈಕ್ಷಣಿಕ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸುವುದರಿಂದ ಸುಸಜ್ಜಿತ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡಿದ್ದೇನೆ ಎಂದರು.

ಸರ್ಕಾರದ ವಿರುದ್ಧ ಅಸಮಾದಾನ: 90 ಕೋಟಿ ಅನುದಾನದಲ್ಲಿ 250 ಹಾಸಿಗೆಗಳ ಜಿಲ್ಲಾಸ್ಪತ್ರೆಗೆ ಕಳೆದ ಸರ್ಕಾರದಲ್ಲಿ ಅಮನುಮತಿ ದೊರೆತಿದ್ದರು. ಪ್ರಸ್ತುತ ಬಿಜೆಪಿ ಸರ್ಕಾರ ಅನುಮೋದನೆ ನೀಡುತ್ತಿಲ್ಲ ಎಂದು ಅವರು ಆರೋಪಿಸಿದರು.

ಡಿವೈಎಸ್ಪಿ ಟಿ.ರಂಗಪ್ಪ ಮಾತನಾಡಿ,  ವಿದ್ಯಾರ್ಥಿಗಳು ಸಂಸ್ಕಾರಯುತ ಹವ್ಯಾಸಗಳನ್ನು ಕೌಟುಂಬಿಕ ನೆಲೆಯಲ್ಲಿ ಗಟ್ಟಿಗೊಳಿಸಿಕೊಳ್ಳುವ ಮೂಲಕ ಸಾಧನೆಯ ಶಿಖರ ಏರಬಹುದು. ಇಲ್ಲವಾದಲ್ಲಿ ಸಾಧನೆ ಹಾದಿಯಲ್ಲಿ ವಿದ್ಯಾರ್ಥಿಗಳು ಎಡುವಬಹುದಾದ ಆತಂಕಗಳ ಜೊತೆ ಬದುಕ ಬೇಕಾಗುತ್ತದೆ.  ದೇಶ ರಾಜ್ಯ ಕಂಡ ಎಲ್ಲಾ ಸಾಧಕರೂ ನಿಮ್ಮಂತೆ ಇಂತಹ ಕಾಲೇಜುಗಳಿಂದಲೆ ಹೋಗಿದ್ದು.  ಹೀಗಾಗಿ ಅವರ ಹಿಂದಿನ ಪರಿಶ್ರಮವನ್ನು ನಿಮ್ಮ ಒಳಗಣ್ಣಿನಿಂದ ಗ್ರಹಿಸಬೇಕಾದ ಪ್ರಜ್ಞೆಯೊಂದಿಗೆ ನಿಮ್ಮ ನಿಮ್ಮ ಶೈಕ್ಷಣಿಕ ಬದುಕು ಸಾಗಿದರೆ ಸಾಕು ನೀವು ನಿಮ್ಮ ದೂರ ದೃಷ್ಠಿಯಲ್ಲಿರುವ ಸಾಧನೆಯ ಶಿಖರ ಏರುವುದು ಕಷ್ಟವೇನು ಆಗುವುದಿಲ್ಲ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.   

ವರ್ಷದಿಂದ ವರ್ಷಕ್ಕೆ ಅಪಘಾತದಿಂದ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಇಂತಹ ಸೂಕ್ಷ್ಮ ಹರಿವುಗಳನ್ನು ನಿಮ್ಮ ಕುಟುಂಬಗಳ ಸದಸ್ಯರಿಗೆ ನೀಡುವ ಕರ್ತವ್ಯ ವಿದ್ಯಾರ್ಥಿಗಳಿಗೆ ಬರಬೇಕು. ಈ ಸಂಬಂಧ ಅಗತ್ಯವಾದ ದಾಖಲೆಗಳನ್ನು ಸಿದ್ದ ಮಾಡಿಸಿಕೊಳ್ಳುವುದು ನಿಮ್ಮ ಶಿಸ್ತಿನ ಭಾಗವಾಗಲಿ ಎಂದು ಅವರು ವಿದ್ಯಾರ್ಥಿಗಳಿಗೆ ಸಲಹೆ‌ ನೀಡಿದರು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಾಧನಾ ಅಕಾಡೆಮಿಯ ಬಿ.ಮಂಜುನಾಥ್,  ಭಾರತೀಯ ವಾಯುಸೇನೆ ಟ್ರೈನರ್ ಬಸವರಾಜು ಕಾಳೆ ಮಾತನಾಡಿದರು. ತಾಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣಗೌಡ, ಸದಸ್ಯ ಹಸನ್ ಘಟ್ಟ ರವಿ ಸೇರಿದಂತೆ ಹಲವರು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಪಶ್ಚಿಮ ಬಂಗಾಳದಲ್ಲಿ ಮಿತಿಮೀರಿದ ಹಿಂಸಾಚಾರ: ಪಿಎ ಸೇರಿ 5 ಸಾವು

ಪಶ್ಚಿಮ ಬಂಗಾಳದಲ್ಲಿ ಮಿತಿಮೀರಿದ ಹಿಂಸಾಚಾರ: ಪಿಎ ಸೇರಿ 5 ಸಾವು

ಚುನಾವಣೆ ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ (West Bengal) ರಾಜಕೀಯ ಕೋಭೆ ತೀವ್ರಗೊಂಡಿದೆ. ಬಿಜೆಪಿ (BJP) ಕಾರ್ಯಕರ್ತರು ಎನ್ನಲಾಗುತ್ತಿರುವವರು ನಡೆಸುತ್ತಿರುವ ರಾಜಕೀಯ ಹಿಂಸಾಚಾರ ತಾರಕಕ್ಕೇರಿದೆ ಎಂಬ ಆರೋಪ ವ್ಯಾಪಕವಾಗಿದೆ.

[ccc_my_favorite_select_button post_id="121830"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]