
ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಹೆಚ್ಚಾಗುತ್ತಿರುವ ಹಿನ್ನೆಲೆ, ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ “ಜಿಲ್ಲಾ ವಿಪತ್ತು ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕೊಳವೆ ಬಾವಿಗಳಿಂದ ಬರುವಂತಹ ನೀರು, ನೇರವಾಗಿ ಕುಡಿಯಲು ಯೋಗ್ಯವಿಲ್ಲದ ಕಾರಣ, ನೀರನ್ನು ಶುದ್ಧೀಕರಿಸಿ, ಜನರಿಗೆ ಸರಬರಾಜು ಮಾಡಬೇಕು. ಇಲ್ಲದಿದ್ದಲ್ಲಿ, ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ತಿಳಿಸಿದರು.
ಶಿಥಿಲಗೊಂಡಿರುವ ಕಟ್ಟಡ, ಮಂದಿರಗಳು ಕಂಡು ಬಂದರೆ, ಅವುಗಳನ್ನು ತೆರವುಗೊಳಿಸಲು ತಹಶೀಲ್ದಾರಗಳು ಕ್ರಮವಹಿಸಬೇಕು ಎಂದು ಹೇಳಿದರು.
ಬೇಸಿಗೆಯಲ್ಲಿ ಜನ ಮತ್ತು ಜಾನುವಾರುಗಳಿಗೆ ಮೇವು ಮತ್ತು ಕುಡಿಯುವ ನೀರಿನ ಸಮಸ್ಯೆಗಳ ಹೆಚ್ಚಾಗಲಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು, ಸಮಸ್ಯೆ ಉಂಟಾಗದಂತೆ ಮುಂಜಾಗ್ರತಾ ಕ್ರಮವಹಿಸಬೇಕು ಎಂದು ತಿಳಿಸಿದರು.
ಉಪ ಅರಣ್ಯ ಸಂರಕ್ಷಾಣಾಧಿಕಾರಿ ಅಂಟೋನಿ ಮರಿಯಪ್ಪನ್ ಅವರು ಮಾತಾನಾಡಿ ಬೇಸಿಗೆ ಸಮಯದಲ್ಲಿ ಕಾಡ್ಗಿಚ್ಚು ನಂದಿಸಲು, ನೀರಿನ ಘಟಕಗಳ ಅವಶ್ಯಕತೆ ಇದೆ. ಈ ಸಂಬಂಧ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್, ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್.ಕೆ.ನಾಯಕ, ಡಿವೈಎಸ್ಪಿ ಟಿ. ರಂಗಪ್ಪ, ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ಡಾ. ವಿನುತ.ಎನ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

