
ದೊಡ್ಡಬಳ್ಳಾಪುರ: ತಾಲ್ಲೂಕಿನ ಇತಿಹಾಸ ಪ್ರಸಿದ್ದ ಶ್ರೀಪ್ರಸನ್ನ ಲಕ್ಷ್ಮೀ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ ಇಂದು ಮಧ್ಯಾಹ್ನ 1 ಗಂಟೆಗೆ ನಗರದ ತೇರಿನ ಬೀದಿಯಲ್ಲಿ ನಡೆಯಲಿದೆ.
ಬಿಸಿಲಹಳ್ಳಿ ಚಿಕ್ಕಚೌಡಪ್ಪನವರ ಭಜನಾ ಮಂಡಲಿ, ಬಿಸಲಹಳ್ಳಿ ಕುಟುಂಬ ಸೇರಿದಂತೆ ವಿವಿಧ ಮಂಡಲಿಗಳಿಂದ ಅರವಟ್ಟಿಕೆ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.
ಬೆಳಗ್ಗೆ 10ಗಂಟೆಗೆ ಶಾಸಕ ಟಿ.ವೆಂಕಟರಮಣಯ್ಯ, ತಾಪಂ ಅಧ್ಯಕ್ಷ ನಾರಾಯಣಗೌಡ ದೇವಾಲಯದಲ್ಲಿ ಪೂಜೆ ಸಲ್ಲಿಸಲಿದ್ದಾರೆ.
ರಥೋತ್ಸವದ ಅಂಗವಾಗಿ ಫೆ.28 ರಂದು ಹಗಲು ಪರಿಷೆ ನಡೆಯಲಿದ್ದು, ಡಾ.ರಾಜ್ ಕುಮಾರ್ ಕಲಾ ಭವನದಲ್ಲಿ ಸಂಜಯನಗರದ ಶ್ರೀ ಅಭಯ ಆಂಜನೇಯ ಸ್ವಾಮಿ ಕೃಪಾ ಪೋಷಿತ ಯುವಕರ ನಾಟಕ ಮಂಡಲಿವತಿಯಿಂದ ಶ್ರೀ ಕೃಷ್ಣ ಸಂಧಾನ ಅಥವಾ ದುರ್ಯೋಧನ ಗರ್ವಭಂಗ ಎಂಬ ಪೌರಾಣಿಕ ನಾಟಕ ಆಯೋಜಿಸಲಾಗಿದೆ. (ಪೋಟೋ ಕೃಪೆ: ಕೀರ್ತಿ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

