ಬೆಂಗಳೂರು: ಹೊಸಪೇಟೆ ನ್ಯಾಯಾಲಯದ ಆವರಣದಲ್ಲಿ ನ್ಯಾಯವಾದಿ ತಾರಳ್ಳಿ ವೆಂಕಟೇಶ ಅವರ ಬರ್ಬರವಾಗಿ ಹತ್ಯೆಗೆ ಕರ್ನಾಟಕ ರಾಜ್ಯ ಯುವ ವಕೀಲರ ಸಂಘ ಆಕ್ರೋಶ ವ್ಯಕ್ತಪಡಿಸಿದೆ.
ಈ ಕೊಲೆ ಘಟನೆ ಅತ್ಯಂತ ಹಿನ ಹಾಗೂ ಪೈಶಾಚಿಕ ಕೃತ್ಯವಾಗಿದೆ. ಕರ್ನಾಟಕ ರಾಜ್ಯ ಯುವ ವಕೀಲರ ಸಂಘ ಈ ಕೃತ್ಯವನ್ನು ಬಲವಾಗಿ ಖಂಡಿಸುತ್ತದೆ.
ದಿನ ನಿತ್ಯ ವಕೀಲರ ಮೇಲೆ ದಾಳಿ, ದೌರ್ಜನ್ಯ ,ಕೊಲೆ ಹಾಗೂ ಹಲ್ಲೆಯಂತಹ ಘಟನೆಗಳು ನಡೆಯುತ್ತಿವೆ. ವಕೀಲರಿಗೆ ಹಾಗೂ ವಕೀಲರ ಕುಟುಂಬಗಳಿಗೆ ರಕ್ಷಣೆ ಇಲ್ಲದಂತಾಗಿದೆ.
ಈ ಕೂಡಲೇ ಸರಕಾರಗಳು ವಕೀಲರ ರಕ್ಷಣಾ ಕಾಯ್ದೆಯನ್ನು ರೂಪಿಸಿ ಜಾರಿಗೊಳಿಸಬೇಕೆಂದು ಕರ್ನಾಟಕ ರಾಜ್ಯ ಯುವ ವಕೀಲರ ಸಂಘ ಸಂಘ ಅಗ್ರಹಿಸಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ.ಸುದ್ದಿಗಳು ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….