
ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅಧಿಕಾರ ದುರ್ಬಳಕೆ ಮಾಡಿ ಮಹಿಳೆಯೋರ್ವರನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ದೂರು ದಾಖಲಾಗಿದೆ.
ಈ ರಾಸಲೀಲೆಯ ವೀಡಿಯೊ ಚಿತ್ರೀಕರಣವನ್ನು ಸಚಿವ ರಮೇಶ್ ಜಾರಕಿಹೊಳಿಯೇ ದೆಹಲಿಯ ಕರ್ನಾಟಕ ಭವನದಲ್ಲಿ ಚಿತ್ರೀಕರಿಸಿದ್ದರು ಎಂದು ಆರೋಪಿಸಲಾಗಿದೆ.
ಸಚಿವರ ಈ ನಡತೆ ಕಂಡು ದೆಹಲಿ ಭವನದಿಂದ ಕೆಲ ಸಚಿವರು ಹೊರ ಹೋಗಿದ್ದರು ಎನ್ನಲಾಗುತ್ತಿದೆ.
ದೂರು ನೀಡಿದ ಬಳಿಕ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ಪ್ರಭಾವಿ ನಾಯಕರ ವಿರುದ್ಧ ದೂರು ನೀಡುತ್ತಿದ್ದೇನೆ. ಸಂತೃಸ್ತೆಯ ಹೆಸರು ಬಹಿರಂಗ ಪಡಿಸುವುದಿಲ್ಲ. ಸಂತ್ರಸ್ತೆಗೆ ಬೆದರಿಕೆ ಇರುವ ಕಾರಣ ಮಹಿಳೆ ಬರುವುದಿಲ್ಲ ಎಂದು ತಿಳಿಸಿದ್ದಾರೆ.(ಸಾಮಾಜಿಕ ಜವಾಬ್ದಾರಿಯಿಂದ ಹರಿತಲೇಖನಿ ವಿಡಿಯೋ ಪ್ರಸಾರ ಮಾಡುತ್ತಿಲ್ಲ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

