ಬೆಂ.ಗ್ರಾ.ಜಿಲ್ಲೆಯ ಶಾಲೆಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಿ: ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿರುವ ಎಲ್ಲಾ ಶಾಲೆಗಳಿಗೆ ಶೌಚಾಲಯ, ಕುಡಿಯುವ ನೀರು ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಅನ್ಬುಕುಮಾರ್ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆದ “ಎಸ್.ಎಸ್.ಎಲ್.ಸಿ. ಫಲಿತಾಂಶ-2020 ಹಾಗೂ ಮೂಲ ಸೌಲಭ್ಯಗಳ ಪ್ರಗತಿ ಪರಿಶೀಲನಾ ಸಭೆ”ಯಲ್ಲಿ ಮಾತನಾಡಿದರು.

ಯಾವ ಶಾಲೆಯೂ ಮೂಲಭೂತ ಸೌಕರ್ಯದಿಂದ ವಂಚಿತವಾಗಬಾರದು ಹಾಗೂ ಶಾಲೆಗಳು ಮೂಲಭೂತ ಸೌಕರ್ಯ ಹೊಂದಿದ್ದಲ್ಲಿ ಮಕ್ಕಳ ದಾಖಲಾತಿಗಳು ಹೆಚ್ಚಳವಾಗುತ್ತದೆ ಎಂದರು.

ಜಿಲ್ಲೆಯಲ್ಲಿ 2020-21ನೇ ಸಾಲಿನಲ್ಲಿ 14,701 ಮಕ್ಕಳು ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯಲಿದ್ದು, ಯಾವ ವಿದ್ಯಾರ್ಥಿಯು ಅನುತ್ತೀರ್ಣರಾಗದಂತೆ ಅಧಿಕಾರಿಗಳು ಮತ್ತು ಶಿಕ್ಷಕರು ಕಾರ್ಯ ನಿರ್ವಹಿಸಿ, ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ತಿಳಿಸಿದರು.

ನರೇಗಾ ಮತ್ತು ಜಲಜೀವನ್ ಮಿಷನ್ ಯೋಜನೆಯಡಿ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಹಾಗೂ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಕಿರು ಅರಣ್ಯ ನಿರ್ಮಿಸವುದರೊಂದಿಗೆ ಶಾಲಾ ಸುತ್ತಮುತ್ತಲಿನ ವಾತಾವರಣ ಉತ್ತಮವಾಗಿರಿಸಲು ಅಧಿಕಾರಿಗಳು ಮುಂದಾಗಬೇಕು ಎಂದರು. 

ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳಿಗೆ ಹೊಸ ಆ್ಯಪ್‍ನ್ನು ರೂಪಿಸಲಾಗಿದ್ದು, ಪ್ರತಿ ತಿಂಗಳು ವಿಷಯವಾರು ಬಹು ಆಯ್ಕೆ ಪ್ರಶ್ನೆಗಳ ಆನ್‍ಲೈನ್ ಪರೀಕ್ಷೆಯನ್ನು ನಡೆಸಲಾಗುತ್ತದೆ.  ಅದೇ ರೀತಿ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ವಿಶೇಷ ಪಾಸಿಂಗ್ ಪ್ಯಾಕೇಜ್ ಅನ್ನು ನೀಡಲಾಗುತ್ತದೆ ಎಂದರು. ಅಲ್ಲದೆ, ಜಿಲ್ಲಾ ಹಂತದಿಂದ ಒಂದು ಕಿರು ಪರೀಕ್ಷೆ ಹಾಗೂ ಒಂದು ಪೂರ್ವ ಸಿದ್ದತಾ ಪರೀಕ್ಷೆಯನ್ನು ಉಚಿತವಾಗಿ ನಡೆಸಲಾಗುತ್ತದೆ ಎಂದರು. 

ಜಿಲ್ಲೆಯಲ್ಲಿ ಶಿಕ್ಷಕರ ಕೊರತೆ ನೀಗಿಸಲು ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಮುಖ್ಯ ಶಿಕ್ಷಕರು ಸಹ ಮಕ್ಕಳಿಗೆ ಪಾಠ ಮಾಡುವಂತೆ ಇಲಾಖೆಯಿಂದ ಆದೇಶ ಹೊರಡಿಸಲಾಗಿದ್ದು, ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಗೆ ತೆರಳಿ ಖಾತ್ರಿಪಡಿಸಿಕೊಳ್ಳಬೇಕು ಎಂದರು. 

ಕಳೆದ ಶೈಕ್ಷಣಿಕ ವರ್ಷದಲ್ಲಿ ಜಿಲ್ಲೆಯು ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಉತ್ತಮ ಸ್ಥಾನ ಪಡೆದಿದ್ದು, ಇದರ ಜೊತೆಗೆ ಕಡಿಮೆ ಫಲಿತಾಂಶ ಪಡೆದಿರುವ ಶಾಲೆಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಮತ್ತು ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ತಿಳಿಸಿದರು. 

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ಮಾತನಾಡಿ, ಜಿಲ್ಲಾ ಪಂಚಾಯಿತಿ ವತಿಯಿಂದ ಶಿಕ್ಷಣ ಇಲಾಖೆಗೆ ಬೇಕಾಗುವ ಮೂಲ ಸೌಕರ್ಯಗಳ ಒದಗಿಸಲು ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು. ಅಲ್ಲದೆ, ಸಿ.ಎಸ್.ಆರ್ ನಿಧಿ, ನರೇಗಾ ಮತ್ತು ಜಲಜೀವನ್ ಯೋಜನೆಯಡಿ ವಿವಿಧ ಕಾಮಗಾರಿಗಳಿಗೆ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕರಾದ ಪ್ರಸನ್ನ, ಬೆಂಗಳೂರು ಗ್ರಾಮಾಂತರ ಉಪ ನಿರ್ದೇಶಕರಾದ ಗಂಗಮಾರೇಗೌಡ, ಜಿಲ್ಲಾ ಡಯಟ್  ಪ್ರಾಂಶುಪಾಲರಾದ ಅನಿತಾ ನಜಾರೇ ಸೇರಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ವಿವಿಧ ಅಧಿಕಾರಿಗಳು ಪಾಲ್ಗೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಪಶ್ಚಿಮ ಬಂಗಾಳದಲ್ಲಿ ಮಿತಿಮೀರಿದ ಹಿಂಸಾಚಾರ: ಪಿಎ ಸೇರಿ 5 ಸಾವು

ಪಶ್ಚಿಮ ಬಂಗಾಳದಲ್ಲಿ ಮಿತಿಮೀರಿದ ಹಿಂಸಾಚಾರ: ಪಿಎ ಸೇರಿ 5 ಸಾವು

ಚುನಾವಣೆ ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ (West Bengal) ರಾಜಕೀಯ ಕೋಭೆ ತೀವ್ರಗೊಂಡಿದೆ. ಬಿಜೆಪಿ (BJP) ಕಾರ್ಯಕರ್ತರು ಎನ್ನಲಾಗುತ್ತಿರುವವರು ನಡೆಸುತ್ತಿರುವ ರಾಜಕೀಯ ಹಿಂಸಾಚಾರ ತಾರಕಕ್ಕೇರಿದೆ ಎಂಬ ಆರೋಪ ವ್ಯಾಪಕವಾಗಿದೆ.

[ccc_my_favorite_select_button post_id="121830"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]