ಬಡ ಜನರ ಕೈಗೆಟಕುವ ದರದಲ್ಲಿ ಮರಳು ಒದಗಿಸಲು ಕ್ರಮ: ಸಚಿವ ನಿರಾಣಿ

ಬೆಂಗಳೂರು: ಬಡ ಜನರ ಕೈಗೆಟಕುವ ದರದಲ್ಲಿ ಮರಳು ಒದಗಿಸಿದಲ್ಲಿ ಕಡಿಮೆ ಖರ್ಚಿನಲ್ಲಿ ಮನೆ ನಿರ್ಮಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಹೊಸ ಮರಳು ನೀತಿ ಜಾರಿಗೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಮುರುಗೇಶ ನಿರಾಣಿ ತಿಳಿಸಿದರು.

ಬಾಗಲಕೋಟೆಯ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಾಜ್ಯದೆಲ್ಲಡೆ ಅನಧಿಕೃವಾಗಿ ಮರಳು ಹಾಗೂ ಜಲ್ಲಿಕಲ್ಲು ಸಾಗಾಣಿಕೆ ಮಾಡಲಾಗುತ್ತಿದೆ. ಇದರಿಂದ ಸರ್ಕಾರಕ್ಕೆ ಬರುವ ಆದಾಯ ಪೋಲಾಗುತ್ತಿದ್ದು, ನಿಯಂತ್ರಣ ಮಾಡಿದಷ್ಟು ಅನಧಿಕೃತ ಗಣಿಗಾರಿಕೆ ಹೆಚ್ಚಾಗುತ್ತಿದೆ. ಮರಳು ಉಚಿತವಾಗಿ ದೊರೆಯುವಂತೆ ಮಾಡಿದಲ್ಲಿ ಸಾಮಾನ್ಯ ಜನರಿಗೆ ಕಡಿಮೆ ಖರ್ಚಿನಲ್ಲಿ ಮನೆ ನಿರ್ಮಿಸಲು ಅನುಕೂಲವಾಗಲಿದೆ ಎಂದರು.

ಉಚಿತವಾಗಿ ಮರಳು ಸಿಗುವಂತೆ ಮಾಡಿದಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವವರಿಗೆ ವರದಾನವಾಗಲಿದ್ದು, ಇದರಿಂದ ಮರಳು ಅಭಾವ ತಪ್ಪಿಸಬಹುದಾಗಿದೆ. ಅಲ್ಲದೇ ಸರಕಾರಕ್ಕೆ ಬರುವ ಆದಾಯ ಹೆಚ್ಚಾಗಲಿದೆ. 10 ಲಕ್ಷ ರೂ.ಗಳ ಒಳಗೆ ನಿರ್ಮಿಸುತ್ತಿರುವ ಮನೆಗಳಿಗೆ ಇದು ಅನ್ವಯವಾಗಲಿದೆ. ಹೊಸ ನೀತಿಯನ್ವಯ ಟ್ಯಾಕ್ಟರ್, ಎತ್ತಿನ ಬಂಡಿ, ದ್ವಿಚಕ್ರ ವಾಹನ, ಮರಳು ಸಾಗಣೆ ಮಾಡಿದರೆ ಕೇಸ್ ದಾಖಲಿಸುವಂತಿಲ್ಲ. ಬೇರೆ ಜಿಲ್ಲೆಗಳಿಗೆ ಸಾಗಾಣಿಕೆ ಮಾಡಿದರೆ ಮಾತ್ರ ಕೇಸ್ ದಾಖಲಿಸಲಾಗುವುದೆಂದು ತಿಳಿಸಿದರು.

ಜಿಲ್ಲೆಯಲ್ಲಿ ಜೆಲ್ಲಿ ಕ್ರಷರ್ ಘಟಕಗಳು 16 ಮಾತ್ರ ಚಾಲ್ತಿಯಲ್ಲಿದ್ದು, ನಮೂನೆ ಡಿ ವಿತರಿಸಿದ 29 ಜೆಲ್ಲಿ ಕ್ರಷರ್ ಘಟಕಗಳಿಗೆ ಅಧಿಕಾರಿಗಳು ಪರಿಶೀಲನೆ ನಡೆಸಿ ಬೇಗನೇ ಅನುಮತಿ ನೀಡಬೇಕು. ಏಕೆಂದರೆ ಘಟಕ ಸ್ಥಾಪನೆಗೆ ಬ್ಯಾಂಕಗಳ ಮೂಲಕ ಸಾಲ ಪಡೆದಿದ್ದು, ಕಂತು ತುಂಬಲು ಸಾಧ್ಯವಾಗುತ್ತಿಲ್ಲ. ಅನುಮತಿ ತುರ್ತು ನೀಡಿದಲ್ಲಿ ಕ್ರಷರ್ ಪ್ರಾರಂಭವಾದರೆ ಅವರಿಗೆ ಅನುಕೂಲವಾಗಲಿದೆ ಎಂದು ಸಚಿವರು ತಿಳಿಸಿದಾಗ ಇನ್ನು 15 ದಿನಗಳಲ್ಲಿ ಅನುಮತಿಗಾಗಿ ಕ್ರಮಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು.

ಜಿಲ್ಲೆಯಲ್ಲಿ ಓವರ್ ಲೋಡ್ ಆಗುತ್ತಿರುವ ಬಗ್ಗೆ ಗಣನೆಗೆ ಬಂದಿದ್ದು, ಅವುಗಳ ತಡೆಗೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯ ಹುನಗುಂದ ತಾಲೂಕಿನ ಬಲಕುಂದಿ ಗ್ರಾಮದಲ್ಲಿ ಮೂರು ತರಹದ ಕಲ್ಲು ಸೀಗುತ್ತಿದ್ದು, ಅವುಗಳಲ್ಲಿರುವ ವ್ಯತ್ಯಾಸದಿಂದ ಹೆಚ್ಚಿನ ಲಾಭವಾಗಲಿದ್ದು, ಬೇರೆಡೆ ರಪ್ತು ಮಾಡುವಾಗ ಗಣನೆಗೆ ತೆಗೆದುಕೊಳ್ಳಲು ತಿಳಿಸಿದರು. 

ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕ ರೋಹಿತ ಮಾತನಾಡಿ 2 ಕಬ್ಬಿಣ ಅದಿರಿನ ಘಟಕ, 28 ಕ್ವಾರಿ, 21 ಪಿಂಕ್ ಗ್ರಾನೈಟ್ಸ್ , 15 ಮರಳು ಘಟಕ, 13 ಬಿಲ್ಡಿಂಗ್ ಸ್ಟೋನ್, 16 ಜೆಲ್ಲಿ ಕ್ರಷರ್‍ಗಳು ಚಾಲ್ತಿಯಲ್ಲಿರುವುದಾಗಿ ಸಭೆಗೆ ತಿಳಿಸಿದರು. ನವೀಕರಣಕ್ಕೆ ಬಂದ ಅರ್ಜಿಗಳನ್ನು ತುರ್ತಾಗಿ ಪರಿಶೀಲಿಸಿ ಅನುಮತಿಗೆ ಕ್ರಮವಹಿಸುವುದಾಗಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿ.ಪಂ ಸದಸ್ಯ ಹೂವಪ್ಪ ರಾಠೋಡ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಇಂಜಿನೀಯರ್ ಶಿವಶಂಕರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಪಶ್ಚಿಮ ಬಂಗಾಳದಲ್ಲಿ ಮಿತಿಮೀರಿದ ಹಿಂಸಾಚಾರ: ಪಿಎ ಸೇರಿ 5 ಸಾವು

ಪಶ್ಚಿಮ ಬಂಗಾಳದಲ್ಲಿ ಮಿತಿಮೀರಿದ ಹಿಂಸಾಚಾರ: ಪಿಎ ಸೇರಿ 5 ಸಾವು

ಚುನಾವಣೆ ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ (West Bengal) ರಾಜಕೀಯ ಕೋಭೆ ತೀವ್ರಗೊಂಡಿದೆ. ಬಿಜೆಪಿ (BJP) ಕಾರ್ಯಕರ್ತರು ಎನ್ನಲಾಗುತ್ತಿರುವವರು ನಡೆಸುತ್ತಿರುವ ರಾಜಕೀಯ ಹಿಂಸಾಚಾರ ತಾರಕಕ್ಕೇರಿದೆ ಎಂಬ ಆರೋಪ ವ್ಯಾಪಕವಾಗಿದೆ.

[ccc_my_favorite_select_button post_id="121830"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]