
ದೊಡ್ಡಬಳ್ಳಾಪುರ: ರಾಜ್ಯದ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ವಯಸ್ಕ ಮಹಿಳೆಗೆ ಉದ್ಯೋಗ ಕೊಡಿಸುವುದಾಗಿ ನಂಬಿಸಿ ರಾಸಲೀಲೆ ನಡೆಸಿರುವ ಕುರಿತು ದೂರು ದಾಖಲು ಮಾಡಿರುವ ವಿಚಾರ ಹಾಗೂ ಇದಕ್ಕೆ ಸಂಬಂಧಿಸಿದಂತೆ ಬಿಡುಗಡೆಯಾಗಿರುವ ವಿಡಿಯೋ ಸಾಕಷ್ಟು ಸದ್ದು ಮಾಡುತ್ತಿದೆ.
ರಾಜ್ಯದಲ್ಲಿ ಕರೊನಾ ವೈರಸ್ ಸೋಂಕು ಮತ್ತು ಬೆಲೆ ಏರಿಕೆಯಿಂದ ಜನರು ಕಂಗಾಲಾಗಿರುವ ಸಂದರ್ಭದಲ್ಲಿ ಸಚಿವ ರಮೇಶ್ ಜಾರಕಿಹೊಳಿಯವರು ಇಡೀ ರಾಜ್ಯವೇ ತಲೆ ತಗ್ಗಿಸುವಂತಾ ಕೆಲಸ ಮಾಡಿದ್ದಾರೆ. ನೈತಿಕತೆ ಇದ್ದಲ್ಲಿ ಕೂಡಲೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಲೊ ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣಗೌಡ ಆಗ್ರಹಿಸಿದ್ದಾರೆ.
ರಾಜ್ಯದ ಜನರು ಕಷ್ಟದಲ್ಲಿ ದಿನ ಕಳೆಯುತ್ತಿರುವ ವೇಳೆಯಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವರು, ತಮ್ಮ ಅಧಿಕಾರ ದುರುಪಯೋಗ ಮಾಡಿಕೊಂಡು ಮಹಿಳೆಯೊಂದಿಗೆ ಅಸಹ್ಯವಾಗಿ ವರ್ತಿಸಿರುವುದು ಖಂಡನೀಯ ಎಂದಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

